
ಕ್ಯಾಲಿಫೋರ್ನಿಯಾ(ಮಾ.16): ಮಾಜಿ ನಂಬರ್ ಒನ್ ಆಟಗಾರ ರೋಜರ್ ಫೆಡರರ್ ಮತ್ತೊಮ್ಮೆ ಭರ್ಜರಿ ಪ್ರದರ್ಶನ ನೀಡುವ ಮೂಲಕ ರಾಫೇಲ್ ನಡಾಲ್ ಅವರನ್ನು ಇಂಡಿಯನ್ ವೇಲ್ಸ್ ಟೂರ್ನಿಯಲ್ಲಿ ಮಣಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟೆನಿಸ್ ರಂಗದ ದಿಗ್ಗಜರಾದ ರಾಫೇಲ್ ನಡಾಲ್ ಮತ್ತು ರೋಜರ್ ಫೆಡರರ್ ನಡುವಿನ ಹೋರಾಟಕ್ಕೆ ಇಂಡಿಯನ್ ವೇಲ್ಸ್ ಟೂರ್ನಿ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಫೆಡರರ್ ಸ್ಪೇನ್'ನ ಎಡಗೈ ಆಟಗಾರ ನಡಾಲ್ ಅವರನ್ನು 6-2, 6-3 ನೇರ ಸೆಟ್'ಗಳ ಮೂಲಕ ಸೋಲಿಸಿದರು. ಈ ಮೂಲಕ ರೋಜರ್ ಫೆಡರರ್ ಟೂರ್ನಿಯಲ್ಲಿ ಕ್ವಾರ್ಟರ್'ಫೈನಲ್ ತಲುಪುವಲ್ಲಿ ಯಶಸ್ವಿಯಾದರು.
ಇನ್ನು ಸ್ವಿಸ್ ದಂತಕತೆ ಫೆಡರರ್, ವಿಶ್ವದ ನಂ.2 ಶ್ರೇಯಾಂಕಿತ ನೋವಾಕ್ ಜೋಕೋವಿಕ್ ಅವರನ್ನು ಮಣಿಸಿರುವ ಆಸ್ಟ್ರೇಲಿಯಾದ ನಿಕ್ ಕೈರ್ಗೋಯಿಸ್ ಅವರನ್ನು ಎದುರಿಸಲಿದ್ದಾರೆ.
ಇದೇ ಜನವರಿಯಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್'ನಲ್ಲಿ ನಡಾಲ್ ಅವರನ್ನು ಮಣಿಸಿದ್ದ ಫೆಡರರ್ ಈಗ ಮತ್ತೊಮ್ಮೆ ಇಂಡಿಯನ್ ವೇಲ್ಸ್ ಟೂರ್ನಿಯಲ್ಲಿ ಸೋಲಿನ ರುಚಿ ತೋರಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.