
ಮೆಲ್ಬರ್ನ್[ಡಿ.29]: ‘ರೋಹಿತ್ ಸಿಕ್ಸರ್ ಬಾರಿಸಿದರೆ ನಾನು ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಬೆಂಬಲಿಸುತ್ತೇನೆ’ ಎಂದು ಕಾಲೆಳೆದಿದ್ದ ಆಸ್ಪ್ರೇಲಿಯಾ ನಾಯಕ ಟಿಮ್ ಪೈನ್‌ಗೆ, ಭಾರತೀಯ ಬ್ಯಾಟ್ಸ್‌ಮನ್ ತಕ್ಕ ಉತ್ತರ ನೀಡಿದ್ದಾರೆ.
3ನೇ ದಿನದಾಟಕ್ಕೂ ಮೊದಲು ಮಾತನಾಡಿದ ರೋಹಿತ್, ‘ಪೈನ್ ಹೇಳಿದ್ದನ್ನು ನಾನು ಕೇಳಿಸಿಕೊಂಡೆ. ಅವರು ಈ ಪಂದ್ಯದಲ್ಲಿ ಶತಕ ಬಾರಿಸಿದರೆ, ಅವರನ್ನು ಖರೀದಿ ಮಾಡಲು ಮುಂಬೈ ಇಂಡಿಯನ್ಸ್ ಮಾಲೀಕರಿಗೆ ಶಿಫಾರಸು ಮಾಡುತ್ತೇನೆ’ ಎಂದರು. ರೋಹಿತ್ ಪ್ರತಿಕ್ರಿಯೆಗೆ ಸಾಮಾಜಿಕ ತಾಣಗಳಲ್ಲಿ ಭಾರತೀಯ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ಆಸೀಸ್ ನಾಯಕನ ವಿರುದ್ಧ ಹರಿಹಾಯ್ದಿದ್ದಾರೆ.
ಬಾಕ್ಸಿಂಗ್ ಡೇ ಟೆಸ್ಟ್’ನಲ್ಲಿ ಭಾರತ ಮೊದಲ ಇನ್ನಿಂಗ್ಸ್’ನಲ್ಲಿ 7 ವಿಕೆಟ್ ಕಳೆದುಕೊಂಡು 443 ರನ್ ಬಾರಿಸಿತ್ತು, ಇನ್ನು ಎರಡನೇ ಇನ್ನಿಂಗ್ಸ್’ನಲ್ಲಿ 8 ವಿಕೆಟ್’ಗೆ 106 ರನ್ ಬಾರಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್’ನಲ್ಲಿ ಕೇವಲ 151 ರನ್’ಗಳಿಗೆ ಸರ್ವಪತನ ಕಂಡು 292 ರನ್’ಗಳ ಹಿನ್ನಡೆ ಅನುಭವಿಸಿತ್ತು. ಅಂತಿಮವಾಗಿ ಟೀಂ ಇಂಡಿಯಾ ನೀಡಿದ್ದ 399 ರನ್’ಗಳ ಗುರಿ ಬೆನ್ನತ್ತಿರುವ ಆಸಿಸ್ 4ನೇ ದಿನದಂತ್ಯಕ್ಕೆ 8 ವಿಕೆಟ್ ಕಳೆದುಕೊಂಡು 258 ರನ್ ಬಾರಿಸಿದ್ದು ಸೋಲಿನತ್ತ ಮುಖ ಮಾಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.