ಟಿ20ಯಲ್ಲಿ ಗರಿಷ್ಠ ಸಿಕ್ಸರ್‌: ದಾಖಲೆ ಹೊಸ್ತಿಲಲ್ಲಿ ರೋಹಿತ್‌

Published : Aug 03, 2019, 03:10 PM IST
ಟಿ20ಯಲ್ಲಿ ಗರಿಷ್ಠ ಸಿಕ್ಸರ್‌: ದಾಖಲೆ ಹೊಸ್ತಿಲಲ್ಲಿ ರೋಹಿತ್‌

ಸಾರಾಂಶ

ಟಿ20 ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಈ ದಾಖಲೆ ನಿರ್ಮಾಣವಾಗೋ ಎಲ್ಲಾ ಸಾಧ್ಯತೆಗಳಿವೆ.  

ಲಾಡರ್‌ಹಿಲ್‌(ಆ.03): ಭಾರತದ ರೋಹಿತ್‌ ಶರ್ಮಾ ಅಂತಾರಾಷ್ಟ್ರೀಯ ಟಿ20ಯಲ್ಲಿ ಗರಿಷ್ಠ ಸಿಕ್ಸರ್‌ ಬಾರಿಸಿದ ಆಟಗಾರ ಎನ್ನುವ ದಾಖಲೆ ಬರೆಯುವ ಹೊಸ್ತಿಲಲ್ಲಿದ್ದಾರೆ. ವಿಂಡೀಸ್‌ನ ಕ್ರಿಸ್‌ ಗೇಲ್‌ ಹೆಸರಿನಲ್ಲಿರುವ ವಿಶ್ವ ದಾಖಲೆಯನ್ನು ಮುರಿಯಲು ರೋಹಿತ್‌ಗೆ ಕೇವಲ 4 ಸಿಕ್ಸರ್‌ಗಳ ಅವಶ್ಯಕತೆ ಇದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ರೋಹಿತ್ ಈ ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ 2019: ಗರಿಷ್ಠ ರನ್ ಸಿಡಿಸಿದ ಟಾಪ್ 5 ಬ್ಯಾಟ್ಸಮನ್ ಲಿಸ್ಟ್!

ಭಾರತ ಪರ 94 ಪಂದ್ಯಗಳನ್ನು ಆಡಿರುವ ರೋಹಿತ್‌ 102 ಸಿಕ್ಸರ್‌ ಸಿಡಿಸಿದ್ದಾರೆ. ವಿಂಡೀಸ್‌ ಪರ 58 ಪಂದ್ಯಗಳಲ್ಲಿ ಗೇಲ್‌ 105 ಸಿಕ್ಸರ್‌ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್‌ನ ಮಾರ್ಟಿನ್‌ ಗಪ್ಟಿಲ್‌ 103 ಸಿಕ್ಸರ್‌ಗಳೊಂದಿಗೆ 2ನೇ ಸ್ಥಾನದಲ್ಲಿದ್ದಾರೆ. ವಿಂಡೀಸ್‌ ವಿರುದ್ಧದ ಸರಣಿಯಲ್ಲಿ ರೋಹಿತ್‌ ಅಗ್ರಸ್ಥಾನಕ್ಕೇರುವ ನಿರೀಕ್ಷೆ ಇದೆ. ಆಗಸ್ಟ್ 3 ರಿಂದ ವೆಸ್ಟ್ ಇಂಡೀಸ್ ವಿರುದ್ದದ 3 ಟಿ20 ಸರಣಿ ಆರಂಭಗೊಳ್ಳಲಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಯಾಮ್ಸನ್ ಪವರ್‌ಗೆ ವಿಂಡೀಸ್ ಉಡೀಸ್, ಸೆಮಿಫೈನಲ್ ಪ್ರವೇಶಿಸಿದ ಭಾರತಕ್ಕೆ ಇಂಗ್ಲೆಂಡ್ ಎದುರಾಳಿ
ಗೆಲ್ಲಲೇಬೇಕಾದ ಪಂದ್ಯದಲ್ಲಿ ಭಾರತಕ್ಕೆ 196 ರನ್ ಟಾರ್ಗೆಟ್, ಕೋಲ್ಕತಾ ಚೇಸ್ ರೆಕಾರ್ಡ್ ಏನು?