ಸಿಎಸ್‌ಕೆ ಬಿಟ್ಟು ಮುಂಬೈ ಇಂಡಿಯನ್ಸ್ ತಂಡದ ಅಭಿಮಾನಿಯಾದ ಝಿವಾ!

Published : Jul 22, 2018, 02:29 PM ISTUpdated : Jul 22, 2018, 02:30 PM IST
ಸಿಎಸ್‌ಕೆ ಬಿಟ್ಟು ಮುಂಬೈ ಇಂಡಿಯನ್ಸ್ ತಂಡದ ಅಭಿಮಾನಿಯಾದ ಝಿವಾ!

ಸಾರಾಂಶ

ಎಂ ಎಸ್ ಧೋನಿ ಪುತ್ರಿ ಝಿವಾ ಧೋನಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಸಿಎಸ್‌ಕೆ ತಂಡದ ಅಭಿಮಾನಿ ಝಿವಾ ಇದೀಗ ಮುಂಬೈ ಇಂಡಿಯನ್ಸ್ ತಂಡಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಿಎಸ್‌ಕೆ ತಂಡದ ಬದಲು, ಮುಂಬೈ ತಂಡಕ್ಕೆ ಬೆಂಬಲ ಸೂಚಿಸಿದ್ದು ಹೇಗೆ? ಇಲ್ಲಿದೆ.

ಲಂಡನ್(ಜು.22): ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಗರಿಷ್ಠ ಅಭಿಮಾನಿಗಳನ್ನ ಹೊಂದಿದೆ. ಈ ಎರಡು ತಂಡಗಳು ಸಾಂಪ್ರದಾಯಿಕ ಎದುರಾಳಿಗಳ ರೀತಿಯಲ್ಲೇ ಹೋರಾಟ ನಡೆಸಿದೆ. ಮುಂಬೈ ಹಾಗೂ ಚೆನ್ನೈ 3 ಬಾರಿ ಐಪಿಎಲ್ ಟ್ರೋಫಿ ಗೆಲ್ಲೋ ಮೂಲಕ ದಾಖಲೆ ಬರೆದಿದೆ.

ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂ ಎಸ್ ಧೋನಿಯಿಂದಾಗಿ ಸಿಎಸ್‌ಕೆಗೆ ಅಪಾರ ಅಭಿಮಾನಿಗಳು ಇದ್ದಾರೆ. ಧೋನಿ ಪುತ್ರಿ ಝಿವಾ ಧೋನಿ ಕೂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಸಿಎಸ್‌ಕೆ ತಂಡಕ್ಕೆ ಬೆಂಬಲ ನೀಡಿದ್ದರು. ಈ ಬಾರಿ ಸಿಎಸ್‌ಕೆ ಐಪಿಎಲ್ ಟ್ರೋಫಿ ಗೆದ್ದ ಕ್ಷಣಗಳನ್ನ ಝಿವಾ ಧೋನಿ ಕೂಡ ಆನಂದಿಸಿದ್ದರು.

ಅಪ್ಪ ಎಂ ಎಸ್ ಧೋನಿ ತಂಡದ ಅಭಿಮಾನಿಯಾಗಿದ್ದ ಝಿವಾ ಧೋನಿ ಇದೀಗ ಮುಂಬೈ ಇಂಡಿಯನ್ಸ್ ಅಭಿಮಾನಿಯಾಗಿದ್ದಾರೆ. ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಮೋಡಿಯಿಂದ ಝಿವಾ ಇದೀಗ ಮುಂಬೈಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

 

;

 

ಇಂಗ್ಲೆಂಡ್ ಪ್ರವಾಸದ ವೇಳೆ ಝಿವಾ ಧೋನಿಗೆ ಮುಂಬೈಗೆ ಬೆಂಬಲ ವ್ಯಕ್ತಪಡಿಸುವಂತೆ ರೋಹಿತ್ ಶರ್ಮಾ ಹೇಳಿದ್ದಾರೆ. ತಕ್ಷಣವೇ ಝಿವಾ ಕಮಾನ್ ಮುಂಬೈ ಇಂಡಿಯನ್ಸ್ ಎಂದು ಹೇಳೋ ಮೂಲಕ ಮುಂಬೈ ತಂಡಕ್ಕೆ ಸಪೂರ್ಟ್ ಮಾಡಿದ್ದಾಳೆ. 

ಝಿವಾ ಬೆಂಬಲ ಸೂಚಿಸಿರೋ ವೀಡಿಯೋವನ್ನ ರೋಹಿತ್ ಶರ್ಮಾ ಟ್ವಿಟರ್‍‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಮುಂಬೈ ತಂಡದ ನೂತನ ಅಭಿಮಾನಿ ಎಂದು ರೋಹಿತ್ ಬರೆದುಕೊಂಡಿದ್ದಾರೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯ್‌ ಹಜಾರೆ ಟ್ರೋಫಿ: ಒಂದೂವರೆ ದಶಕದ ಬಳಿಕ ಡೆಲ್ಲಿ ಪರ ವಿರಾಟ್ ಕೊಹ್ಲಿ ಮೈದಾನಕ್ಕೆ! ಬೆಂಗಳೂರಲ್ಲಿ ನಡೆಯುತ್ತೆ ಮ್ಯಾಚ್‌
ಕೇವಲ ₹10 ಲಕ್ಷ ಕೊಡಿ, ಮೆಸ್ಸಿ ಜತೆಗೆ ಒಂದು ಫೋಟೋ ತೆಗೆಸಿಕೊಳ್ಳಿ! ಕೇವಲ 100 ಮಂದಿಗಷ್ಟೇ ಈ ಚಾನ್ಸ್!