ರೋಹಿತ್’ಗೆ ರೆಸ್ಟ್; ಈ ಇಬ್ಬರಿಗೆ ವಿಶ್ವಕಪ್ ಎಂಟ್ರಿ ಕೊಡಲು ಕೊನೆಯ ಚಾನ್ಸ್..?

By Web DeskFirst Published Feb 12, 2019, 3:56 PM IST
Highlights

ಫೆಬ್ರವರಿ 24ರಿಂದ ಆರಂಭವಾಗಲಿರುವ ಸೀಮಿತ ಓವರ್’ಗಳ ಸರಣಿಯಲ್ಲಿ ಆರಂಭಿಕ ಬ್ಯಾಟ್ಸ್’ಮನ್ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಿ ಟೀಂ ಇಂಡಿಯಾದ ಮತ್ತಿಬ್ಬರು ಸ್ಟಾರ್ ಕ್ರಿಕೆಟಿಗರಿಗೆ ತಂಡದಲ್ಲಿ ಅವಕಾಶ ಕಲ್ಪಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಅಷ್ಟಕ್ಕೂ ಯಾರೂ ಆ ಇಬ್ಬರು ಆಟಗಾರರು ಎನ್ನುವ ಕುತೂಹಲಕ್ಕೆ ಇಲ್ಲಿದೆ ಉತ್ತರ... 

ನವದೆಹಲಿ[ಫೆ.12]: ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭರ್ಜರಿ ಜಯಭೇರಿ ಬಾರಿಸಿ ತವರಿಗೆ ಆಗಮಿಸಿರುವ ಭಾರತ ಅಲ್ಪ ಬಿಡುವಿನ ಬಳಿಕ ಆಸ್ಟ್ರೇಲಿಯಾ ವಿರುದ್ಧ 2 ಪಂದ್ಯಗಳ ಟಿ20 ಹಾಗೂ 5 ಪಂದ್ಯಗಳ ಏಕದಿನ ಸರಣಿಯಾಡಲಿದೆ. ಮುಂಬರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಭಾರತದ ಆಯ್ಕೆ ಸಮಿತಿಯು ಕೊನೆಯ ಕ್ಷಣದಲ್ಲಿ ಕೆಲವೊಂದು ಬದಲಾವಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಐಸಿಸಿ ಟಿ20 ರ‍್ಯಾಂಕಿಂಗ್: ವೃತ್ತಿಜೀವನದ ಶ್ರೇಷ್ಠ ಸಾಧನೆ ಮಾಡಿದ ಕುಲ್ದೀಪ್

ಫೆಬ್ರವರಿ 24ರಿಂದ ಆರಂಭವಾಗಲಿರುವ ಸೀಮಿತ ಓವರ್’ಗಳ ಸರಣಿಯಲ್ಲಿ ಆರಂಭಿಕ ಬ್ಯಾಟ್ಸ್’ಮನ್ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಿ ಕನ್ನಡಿಗ ಕೆ.ಎಲ್ ರಾಹುಲ್ ಹಾಗೂ ಮಧ್ಯಮಕ್ರಮಾಂಕದ ಬ್ಯಾಟ್ಸ್’ಮನ್ ಅಜಿಂಕ್ಯ ರಹಾನೆಗೆ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಕೊನೆಯ ಅವಕಾಶವನ್ನು ಆಯ್ಕೆ ಸಮಿತಿ ನೀಡುವ ಸಾಧ್ಯತೆಯಿದೆ. ಕಳಪೆ ಫಾರ್ಮ್’ನಿಂದ ಕಂಗೆಟ್ಟಿರುವ ಕೆ.ಎಲ್ ರಾಹುಲ್ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಿದ್ದರೆ, ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕಿದೆ. 

ಇಂಡೋ-ಕಿವೀಸ್ ಕೊನೆಯ ಟಿ20 ಪಂದ್ಯದಲ್ಲಿ ಅಪರೂಪದ ದಾಖಲೆ ಬರೆದ ಧೋನಿ

ಇನ್ನು ನ್ಯೂಜಿಲೆಂಡ್ ವಿರುದ್ಧದ ಕೊನೆಯ ಎರಡು ಏಕದಿನ ಪಂದ್ಯಗಳಿಂದ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ ತಂಡ ಕೂಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಇನ್ನು ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಎರಡನೇ ವಿಕೆಟ್’ಕೀಪರ್ ಸ್ಥಾನಕ್ಕೆ ದಿನೇಶ್ ಕಾರ್ತಿಕ್ ಹಾಗೂ ರಿಷಭ್ ಪಂತ್ ನಡುವೆ ಸ್ಫರ್ಧೆ ಜೋರಾಗಿದೆ. ಮಹೇಂದ್ರ ಸಿಂಗ್ ಧೋನಿ ವಿಕೆಟ್’ಕೀಪಿಂಗ್’ನಲ್ಲಿ ಟೀಂ ಇಂಡಿಯಾದ ಮೊದಲ ಆಯ್ಕೆಯಾಗಿದ್ದು, ಎರಡನೇ ವಿಕೆಟ್’ಕೀಪಿಂಗ್ ಸ್ಥಾನಕ್ಕೆ ತೀವ್ರ ಸ್ಫರ್ಧೆ ಏರ್ಪಟ್ಟಿದೆ.

ಈ ಇಬ್ಬರು ಇದ್ದರೆ ಈ ಸಲ ವಿಶ್ವಕಪ್ ನಮ್ದೇ: ರಿಕಿ ಪಾಂಟಿಂಗ್

ಇನ್ನು ಬೌಲಿಂಗ್ ವಿಭಾಗದಲ್ಲಿ ಕೂಡಾ ಕೆಲ ಬದಲಾವಣೆಯಾಗುವ ಸಾಧ್ಯತೆಯಿದ್ದು, ಕಳೆದ ವರ್ಷ ಟೀಂ ಇಂಡಿಯಾ ಆಡಿದ ಬಹುತೇಕ ಎಲ್ಲಾ ಸೀಮಿತ ಓವರ್’ಗಳ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಮಣಿಕಟ್ಟು ಸ್ಪಿನ್ನರ್’ಗಳಾದ ಯುಜುವೇಂದ್ರ ಚಹಲ್ ಹಾಗೂ ಕಲ್ದೀಪ್ ಯಾದವ್’ಗೆ ಆಯ್ಕೆ ಸಮಿತಿ ವಿಶ್ರಾಂತಿ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇನ್ನು ಆಸಿಸ್ ಟೆಸ್ಟ್ ಸರಣಿ ಬಳಿಕ ವಿಶ್ರಾಂತಿ ಪಡೆದಿದ್ದ ಜಸ್ಪ್ರೀತ್ ಬುಮ್ರಾ ಬಹುತೇಕ ತಂಡ ಕೂಡಿಕೊಳ್ಳಲಿದ್ದಾರೆ. 

click me!