
ದುಬೈ(ಮೇ.18): ಚಾಂಪಿಯನ್ಸ್ ಟ್ರೋಫಿಗೆ ಅಂಪೈರ್, ಮ್ಯಾಚ್ ರೆಫ್ರಿಗಳ ಹೆಸರು ಪ್ರಕಟವಾಗಿದ್ದು, ಭಾರತದ ಸುಂದರಂ ರವಿ ಮೊದಲ ಬಾರಿಗೆ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
ಈ ಬಾರಿ ಆಯ್ಕೆಯಾಗಿರುವ ಅಂಪೈರ್'ಗಳ ಪೈಕಿ ರವಿ ಏಕೈಕ ಭಾರತೀಯ. ಜೂ.1ರಂದು ಇಂಗ್ಲೆಂಡ್ ಹಾಗೂ ಬಾಂಗ್ಲಾದೇಶಗಳ ನಡುವೆ ನಡೆಯಲಿರುವ ಆರಂಭಿಕ ಪಂದ್ಯದಲ್ಲಿ ರವಿ ಕಾರ್ಯನಿರ್ವಹಿಸಲಿದ್ದಾರೆ. ಸೆಮೀಸ್ ಮತ್ತು ಫೈನಲ್'ಗೆ ತಲುಪುವ ದೇಶಗಳನ್ನು ಆಧರಿಸಿ ಅಂಪೈರ್ ಹಾಗೂ ಮ್ಯಾಚ್ ರೆಫ್ರಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಐಸಿಸಿ ತಿಳಿಸಿದೆ.
ಜೂ.18ರ ತನಕ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು ಮೂವರು ಮ್ಯಾಚ್ ರೆಫ್ರಿಗಳು ಹಾಗೂ 12 ಅಂಪೈರ್‌ಗಳು ಕಾರ್ಯ ನಿರ್ವಹಿಸಲಿದ್ದಾರೆ. ಪಾಕಿಸ್ತಾನದ ಅಲೀಂ ದಾರ್ 5ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಗೆ ಅಂಪೈರ್ ಆಗಿ ಆಯ್ಕೆಯಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.