
ಬೆಂಗಳೂರು(ಮೇ.05): ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಗುಜರಾತ್ ಲಯನ್ಸ್ 20 ಓವರ್'ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 208ರನ್. ಇದಕ್ಕುತ್ತರವಾಗಿ ಡೆಲ್ಲಿ ಡೇರ್'ಡೆವಿಲ್ಸ್ ತಂಡ ಇನ್ನೂ 15 ಎಸೆತಗಳು ಬಾಕಿ ಇರುವಂತೆಯೇ ಸ್ಮರಣೀಯ ಗೆಲುವನ್ನು ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.
ಇದಕ್ಕೆಲ್ಲಾ ಕಾರಣವಾಗಿದ್ದು ಡೆಲ್ಲಿ ಯುವ ಪ್ರತಿಭೆ ರಿಷಭ್ ಪಂತ್ ಹಾಗೂ ಕೇರಳ ಆಟಗಾರ ಸಂಜು ಸ್ಯಾಮ್ಸನ್ ಸ್ಪೋಟಕ ಬ್ಯಾಟಿಂಗ್..!
ಬೃಹತ್ ಗುರಿ ಬೆನ್ನತ್ತಿದ್ದ ಡೆಲ್ಲಿ ಡೇರ್'ಡೆವಿಲ್ಸ್ ಪಡೆಗೆ, 2015ರ ವಿಶ್ವಕಪ್ ಫೈನಲ್ ಪಂದ್ಯದ ಹೀರೋ ಜೇಮ್ಸ್ ಫಾಲ್ಕನರ್ ಆಗಲಿ, ಟೆಸ್ಟ್ ಕ್ರಿಕೆಟ್'ನ ನಂಬರ್ ಒನ್ ಬೌಲರ್ ರವೀಂದ್ರ ಜಡೇಜಾ ಅವರಾಗಲೀ ಸವಾಲು ಎನಿಸಲೇ ಇಲ್ಲ.
ಅಬ್ಬರದ ಬ್ಯಾಟಿಂಗ್ ನಡೆಸಿದ ರಿಷಭ್ ಪಂತ್, ಕೇವಲ 43 ಎಸೆತಗಳಲ್ಲಿ 6 ಬೌಂಡರಿ ಹಾಗೂ 9 ಭರ್ಜರಿ ಸಿಕ್ಸರ್'ಗಳ ನೆರವಿನಿಂದ 97ರನ್ ಸಿಡಿಸಿ ಮಿಂಚಿದರು. ಡೆಲ್ಲಿ ಆಟಗಾರನ ಬ್ಯಾಟಿಂಗ್ ಬಗ್ಗೆ ಸಚಿನ್ ಸೇರಿದಂತೆ ಕ್ರಿಕೆಟ್ ದಿಗ್ಗಜರು ಪ್ರತಿಕ್ರಿಯಿಸಿದ್ದು ಹೀಗೆ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.