
ಬೆಂಗಳೂರು(ಫೆ.18): ಭಾರತದ ಯುವ ಸ್ಪಿನ್ನರ್'ಗಳಾದ ಕುಲ್ದೀಪ್ ಹಾಗೂ ಚಾಹಲ್ ಪ್ರದರ್ಶನದ ಬಗ್ಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಯುವ ಸ್ಪಿನ್ ಜೋಡಿ, ಭಾರತ ವಿದೇಶ ಪ್ರವಾಸಗಳಲ್ಲಿ ಯಶಸ್ಸು ಸಾಧಿಸಲು ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಸಚಿನ್ ಅಭಿಪ್ರಾಯಪಟ್ಟಿದ್ದಾರೆ. ‘ಕುಲ್ದೀಪ್, ಚಾಹಲ್ ಸಂಘಟಿತ ಪ್ರದರ್ಶನ ತೋರುತ್ತಿದ್ದಾರೆ. ಇವರ ಬೌಲಿಂಗ್ ಶೈಲಿಯನ್ನು ವಿಶ್ವದ ಶ್ರೇಷ್ಠ ಬ್ಯಾಟ್ಸ್'ಮನ್'ಗಳಿಗೂ ಅರಿಯಲು ಸಾಧ್ಯವಾಗುತ್ತಿಲ್ಲ. ತಂಡದ ಪಾಲಿಗೆ ಇದು ಉತ್ತಮ ಬೆಳವಣಿಗೆ’ ಎಂದು ಸಚಿನ್ ಹೇಳಿದ್ದಾರೆ.
6 ಪಂದ್ಯಗಳ ಏಕದಿನ ಸರಣಿಯಲ್ಲಿ ಕುಲ್ದೀಪ್-ಚಾಹಲ್ ಜೋಡಿ 33 ವಿಕೆಟ್ ಪಡೆಯುವ ಮೂಲಕ ಟೀಂ ಇಂಡಿಯಾ ಆಫ್ರಿಕಾ ನೆಲದಲ್ಲಿ ಚೊಚ್ಚಲ ಸರಣಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಈ ಟೂರ್ನಿಯಲ್ಲಿ ಕುಲ್ದೀಪ್ 17 ವಿಕೆಟ್ ಪಡೆದರೆ, ಚಾಹಲ್ 16 ವಿಕೆಟ್ ಪಡೆದಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.