
ಕ್ರಿಕೆಟ್ ದಂತಕತೆ, ಟೀಂ ಇಂಡಿಯಾಗೆ ಚೊಚ್ಚಲ ವಿಶ್ವಕಪ್ ಗೆದ್ದುಕೊಟ್ಟ ನಾಯಕ, ಶ್ರೇಷ್ಠ ಆಲ್ರೌಂ ಕಪಿಲ್ ದೇವ್ ಇಂದು 59ನೇ ವಸಂತಕ್ಕೆ ಕಾಲಿರಿಸಿದ್ದಾರೆ.
1978ರಲ್ಲಿ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ ಕಪಿಲ್ ದೇವ್, 1983ರ ವಿಶ್ವಕಪ್ ಟೂರ್ನಿಯಲ್ಲಿ ಬಲಿಷ್ಠ ವೆಸ್ಟ್ ಇಂಡಿಸ್ ಮಣಿಸಿ ಟೀಂ ಇಂಡಿಯಾಗೆ ಚೊಚ್ಚಲ ವಿಶ್ವಕಪ್ ಗೆದ್ದುಕೊಟ್ಟರು. ಹರ್ಯಾಣ ಹರಿಕೇನ್ ಖ್ಯಾತಿಯ ಕಪಿಲ್ 131 ಟೆಸ್ಟ್ ಪಂದ್ಯಗಳನ್ನಾಡಿ 434 ವಿಕೆಟಗಳನ್ನು ಕಬಳಿಸಿದ್ದೂ ಮಾತ್ರವಲ್ಲದೇ ಬ್ಯಾಟಿಂಗ್'ನಲ್ಲಿ 5248 ರನ್ ಬಾರಿಸಿದ್ದಾರೆ. ಇನ್ನು ಏಕದಿನ ಕ್ರಿಕೆಟ್'ನಲ್ಲಿ 225 ಪಂದ್ಯಗಳನ್ನಾಡಿದ್ದು ಬೌಲಿಂಗ್'ನಲ್ಲಿ 223 ವಿಕೆಟ್ ಪಡೆದರೆ, ಬ್ಯಾಟಿಂಗ್'ನಲ್ಲಿ 3783 ರನ್ ಬಾರಿಸಿದ್ದಾರೆ. 1983ರ ವಿಶ್ವಕಪ್ ಟೂರ್ನಿಯಲ್ಲಿ ಜಿಂಬಾಬ್ವೆ ವಿರುದ್ಧ ಬಾರಿಸಿದ ಅಜೇಯ 175 ರನ್ ಕಪಿಲ್ ದೇವ್ ಬಾರಿಸಿದ ವೈಯುಕ್ತಿಕ ಗರಿಷ್ಠ ಮೊತ್ತವಾಗಿದೆ.
ಕಪಿಲ್ ದೇವ್ ಹುಟ್ಟುಹಬ್ಬಕ್ಕೆ ಕ್ರಿಕೆಟ್ ದಿಗ್ಗಜರು ಶುಭಕೋರಿದ್ದು ಹೀಗೆ..
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.