ಲಾಭದಾಯಕ ಹುದ್ದೆ ಹೊಂದಿಲ್ಲ: ತೆಂಡುಲ್ಕರ್

By Web DeskFirst Published May 6, 2019, 11:09 AM IST
Highlights

ಹಿತಾಸಕ್ತಿ ಸಂಘರ್ಷಕ್ಕೆ ಸಿಲುಕಿರುವ ಸಲಹಾ ಸಮಿತಿ ಸದಸ್ಯರಾದ ಸಚಿನ್ ತೆಂಡುಲ್ಕರ್, ವಿವಿಎಸ್ ಲಕ್ಷ್ಮಣ್ ಹಾಗೂ ಸೌರವ್ ಗಂಗೂಲಿ ಪೈಕಿ ಇದೀಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ತುಟಿಬಿಚ್ಚಿದ್ದಾರೆ.

ನವದೆಹಲಿ[ಮೇ.06]: ಬಿಸಿಸಿಐ ಮತ್ತು ಐಪಿಎಲ್‌ನಲ್ಲಿ ಲಾಭದಾಯಕ ಹುದ್ದೆ ಹೊಂದಿದ್ದಾರೆಂದು ಕ್ರಿಕೆಟ್ ವಲಯದಲ್ಲಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈಗಾಗಲೇ ಬಿಸಿಸಿಐಗೆ ಪತ್ರ ಮುಖೇನ ಉತ್ತರಿಸಿದ್ದ ಸಚಿನ್ ತೆಂಡುಲ್ಕರ್ ಸೇರಿ ಕ್ರಿಕೆಟ್ ಸಲಹಾ ಸಮಿತಿ ಸದಸ್ಯರಾದ ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷ್ಮಣ್ ಅವರಿಗೆ ಮತ್ತೊಮ್ಮೆ ನೋಟಿಸ್ ಜಾರಿಯಾಗಿದೆ. 

ಮುಂಬೈ ಇಂಡಿಯನ್ಸ್’ನಿಂದ ಸಚಿನ್‌ಗಿಲ್ಲ ಸಂಭಾವನೆ!

ಆದರೆ, ಬಿಸಿಸಿಐ ಎತ್ತಿರುವ ಈ ವಿಚಾರಕ್ಕೆ ಸಚಿನ್ ಪ್ರತಿಕ್ರಿಯಿಸಿ, ಇದರಲ್ಲಿ ಯಾವುದೇ ಹಿತಾಸಕ್ತಿ ಸಂಘರ್ಷ ನಿಯಮ ಉಲ್ಲಂಘನೆಯ ಪ್ರಶ್ನೆಯೇ ಉದ್ಭವಿಸದು, ಮುಂಬೈ ಇಂಡಿಯನ್ಸ್ ತಂಡದ ಯಾವುದೇ ಲಾಭದಾಯಕ ಹುದ್ದೆಯನ್ನೂ ನಾನು ಹೊಂದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಬಿಸಿಸಿಐ ಗೊಂದಲಕ್ಕೆ ತೆರೆ ಎಳೆಯಬೇಕು ಎಂದೂ ಹೇಳಿದ್ದಾರೆ. 

ಬಿಸಿಸಿಐ ಆಡಳಿತ ಸಮಿತಿ ವಿರುದ್ಧ ಲಕ್ಷ್ಮಣ್‌ ಗರಂ!

2013ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್’ಗೆ ಗುಡ್’ಬೈ ಹೇಳಿದ್ದ ಸಚಿನ್ ತೆಂಡುಲ್ಕರ್ 2015ರಲ್ಲಿ ಭಾರತೀಯ ಕ್ರಿಕೆಟ್ ಸಲಹಾ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದರು. 

click me!