
ನವದೆಹಲಿ(ಫೆ.07): ಅಂಧರ ಕ್ರಿಕೆಟ್ ಸಂಸ್ಥೆಯನ್ನು ಮಾನ್ಯತೆ ಮಾಡಬೇಕು ಎಂದು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ಮನವಿ ಮಾಡಿದ್ದಾರೆ. ಜತೆಗೆ ಅಂಧ ಕ್ರಿಕೆಟಿಗರಿಗೆ ಪಿಂಚಣಿ ಸೌಲಭ್ಯವನ್ನು ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಇತ್ತೀಚೆಗಷ್ಟೇ(ಜ.20) ನಡೆದ ಅಂಧರ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡವನ್ನು ಮಣಿಸಿ ಭಾರತ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದರ ಬೆನ್ನಲ್ಲೇ ಆಟಗಾರರ ಆರ್ಥಿಕ ಪರಿಸ್ಥಿತಿಗಳ ಬಗ್ಗೆ ಹಲವಾರು ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದವು. ಹೀಗಾಗಿ ಈ ಕುರಿತಂತೆ ಆಡಳಿತ ಮಂಡಳಿಯ ಅಧ್ಯಕ್ಷ ವಿನೋದ್ ರಾಯ್'ಗೆ ಪತ್ರಬರೆದಿರುವ ತೆಂಡುಲ್ಕರ್, ಅಂಧರ ಕ್ರಿಕೆಟ್ ಸಂಸ್ಥೆಗೆ ಬಿಸಿಸಿಐ ಮಾನ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಸತತ 4 ಜಯಭೇರಿ ಬಾರಿಸಿದ ಅಂಧರ ಕ್ರಿಕೆಟ್ ತಂಡದ ಸಾಧನೆಯನ್ನು ನಾವೆಲ್ಲ ಸಂಭ್ರಮ ಪಟ್ಟಿದ್ದೇವೆ. ಅಂಧರ ಕ್ರಿಕೆಟ್ ಸಂಸ್ಥೆಗೆ ಬಿಸಿಸಿಐ ಮಾನ್ಯತೆ ನೀಡಬೇಕು ಎಂದು ಈ ಮೂಲಕ ಮನವಿ ಸಲ್ಲಿಸುತ್ತಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ಅಂಧ ಕ್ರಿಕೆಟಿಗರ ಕರುಣಾಜನಕ ಕಥೆಯನ್ನೊಮ್ಮೆ ನೋಡಲು ಈ ಲಿಂಕ್ ಕ್ಲಿಕ್ ಮಾಡಿ:
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.