
ಮುಂಬೈ(ನ.14): ಮಕ್ಕಳ ದಿನಾಚರಣೆಯಂದು ಮಗುವಂತಿರಲು ಅನೇಕರು ಇಷ್ಟಪಡುತ್ತಾರೆ. ಇಲ್ಲವಾದರೆ ಮಕ್ಕಳೊಂದಿಗೆ ಸೇರಿ ಆಡಿ, ಕುಣಿದು ಸಿಹಿ ತಿಂದು ಸಂಭ್ರಮಿಸುತ್ತಾರೆ.
ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಸಹ ಇದೇ ರೀತಿಯಲ್ಲೇ ಈ ಬಾರಿಯ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು.
ಮೇಕ್-ಎ-ವಿಶ್ ಫೌಂಡೇಷನ್ ವತಿಯಿಂದ ನ. 14ರಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಂಬೈಕರ್ ಮಕ್ಕಳೊಂದಿಗೆ ಕ್ರಿಕೆಟ್ ಆಡುವ ಮೂಲಕ ರಂಜಿಸಿದರು.
ಎಲ್ಲವನ್ನೂ ಮರೆತು, ಮಕ್ಕಳೊಂದಿಗೆ ಮಕ್ಕಳಾಗಿ ಆಟವಾಡುವುದು ಒಂದು ಒಳ್ಳೆಯ ಅನುಭವ ನೀಡುತ್ತದೆ ಎಂದು ಟ್ವೀಟ್ ಮಾಡಿರುವ ಸಚಿನ್, ಈ ಸಮಾರಂಭವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.