
ನವದೆಹಲಿ(ಅ.09): ಕಳೆದ 10 ವರ್ಷಗಳಿಂದ ಪರುಪಳ್ಳಿ ಕಶ್ಯಪ್ ಪ್ರೇಮ ಪಾಶದಲ್ಲಿ ಬಿದ್ದಿರುವ ಸೈನಾ ನೆಹ್ವಾಲ್ ಈ ವರ್ಷದ ಡಿ. 16 ರಂದು ಮಾತ್ರ ಯಾವುದೇ ಕೆಲಸ ಇಲ್ಲದೆ ಇರುವುದಾಗಿ ಪುಣೆಯಲ್ಲಿ ಹೇಳಿದ್ದಾರೆ. ಈ ಮೂಲಕ ತಮ್ಮ ಮದುವೆ ದಿನಾಂಕ ಅದೇ ದಿನ ಎಂದು ಸೈನಾ ಮಾರ್ಮಿಕವಾಗಿ ಖಚಿತಪಡಿಸಿದ್ದಾರೆ.
‘ಮದುವೆಯಾಗುವುದಕ್ಕೆ ಇದು ಅತ್ಯಂತ ಸೂಕ್ತ ಸಮಯವಾಗಿದೆ. ಆದರೆ ಬೇರೆ ದಿನ ನನಗೆ ಬಿಡುವಿಲ್ಲದ ಕೆಲಸ ಕಾರ್ಯಗಳು ಇವೆ. ಡಿ. 20 ರಿಂದ ಪ್ರೀಮಿಯರ್ ಬ್ಯಾಡ್ಮಿಂಟನ್‌ನಲ್ಲಿ ಆಡಲಿದ್ದೇನೆ ಎಂದು ಒಲಿಂಪಿಕ್ಸ್ ಕಂಚು ವಿಜೇತೆ ಸೈನಾ ನೆಹ್ವಾಲ್ ಹೇಳಿದ್ದಾರೆ.
ಸೈನಾ ಹಾಗೂ ಪರುಪಳ್ಳಿ ಕಶ್ಯಪ್ ಇಬ್ಬರೂ ಕೂಡ ಪುಲ್ಲೇಲ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಬೆಳೆದ ಪ್ರತಿಭೆಗಳು. ಹೀಗಾಗಿ ತಮ್ಮ ಅಭ್ಯಾಸದ ದಿನಗಳಿಂದ ಪರಿಚಿತರಾಗಿದ್ದ ಈ ಜೋಡಿ ಇದೀಗ ವೈವಾಹಿಕ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದಾರೆ.
ಮೂಲಗಳ ಪ್ರಕಾರ ಡಿಸೆಂಬರ್ 16 ರಂದು ಎರಡು ಕುಟುಂಬ ಹಾಗೂ ಆಪ್ತರ ಸಮ್ಮುಖದಲ್ಲಿ ಸೈನಾ ಹಾಗೂ ಪರುಪಳ್ಳಿ ಕಶ್ಯಪ್ ವಿವಾಹ ನಡೆಯಲಿದೆ. ಬಳಿಕ ಡಿಸೆಂಬರ್ 21 ರಂದು ಅದ್ಧೂರಿ ಆರತಕ್ಷತೆ ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.