ಪದ್ಮ ಪ್ರಶಸ್ತಿ ಸ್ವೀಕರಿಸಿದ ದೀಪಾ, ಸಾಕ್ಷಿ, ವಿಕಾಸ್, ತಂಗವೇಲು

By Suvarna Web DeskFirst Published Apr 13, 2017, 10:55 AM IST
Highlights

ಭಾರತದ ಮಹಿಳಾ ಜಿಮ್ನಾಸ್ಟಿಕ್ ಪಟು ದೀಪಾ ಕರ್ಮಾಕರ್, ರಿಯೊ ಒಲಿಂಪಿಕ್ಸ್ ಕೂಟದಲ್ಲಿ ಪ್ರಭಾವಿ ಪ್ರದರ್ಶನ ತೋರಿ ಕೆಲವೇ ಪಾಯಿಂಟ್ಸ್‌'ಗಳ ಅಂತರದಲ್ಲಿ ಕಂಚಿನ ಪದಕವನ್ನು ತಪ್ಪಿಸಿಕೊಂಡಿದ್ದರು.

ನವದೆಹಲಿ(ಏ.13): ಕರ್ನಾಟಕದ ಹೆಮ್ಮೆಯ ಕ್ರೀಡಾಪಟು ವಿಕಾಸ್ ಗೌಡ, ದೀಪಾ ಕರ್ಮಾಕರ್, ಸಾಕ್ಷಿ ಮಲಿಕ್ ಮತ್ತು ಅಂಗವಿಕಲ ಕ್ರೀಡಾಳು ಮರಿಯಪ್ಪನ್ ತಂಗವೇಲು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ದೇಶದ ಅತ್ಯುನ್ನತ ಗೌರವವಾದ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದರು.

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಟೂರ್ನಿಗಳಲ್ಲಿ ಪ್ರಶಸ್ತಿ ಜಯಿಸಿದ ಸಾಧನೆಗಾಗಿ ಕ್ರೀಡಾಪಟುಗಳಿಗೆ ಈ ಗೌರವ ಸಲ್ಲಿಸಲಾಗಿದೆ. ಭಾರತದ ಮಹಿಳಾ ಜಿಮ್ನಾಸ್ಟಿಕ್ ಪಟು ದೀಪಾ ಕರ್ಮಾಕರ್, ರಿಯೊ ಒಲಿಂಪಿಕ್ಸ್ ಕೂಟದಲ್ಲಿ ಪ್ರಭಾವಿ ಪ್ರದರ್ಶನ ತೋರಿ ಕೆಲವೇ ಪಾಯಿಂಟ್ಸ್‌'ಗಳ ಅಂತರದಲ್ಲಿ ಕಂಚಿನ ಪದಕವನ್ನು ತಪ್ಪಿಸಿಕೊಂಡಿದ್ದರು.

ಇನ್ನು ಸಾಕ್ಷಿ ಮಲಿಕ್ ಮಹಿಳಾ ವಿಭಾಗದ ಕುಸ್ತಿಯಲ್ಲಿ ಕಂಚಿನ ಸಾಧನೆ ಮಾಡಿದ್ದರು. ವಿಕಾಸ್ ಗೌಡ, ಒಲಿಂಪಿಕ್ಸ್ ಕೂಟಕ್ಕೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದರೂ ಅಂತರಾಷ್ಟ್ರೀಯ ಟೂರ್ನಿಗಳಲ್ಲಿ ಪ್ರಭಾವಿ ಪ್ರದರ್ಶನದಿಂದ ಗಮನಸೆಳೆದಿದ್ದರು.

ಇದರ ಜೊತೆಗೆ ಪ್ಯಾರಾಲಂಪಿಕ್ಸ್ ಕ್ರೀಡಾಕೂಟದಲ್ಲಿ ತಮಿಳುನಾಡಿನ ಕ್ರೀಡಾಳು ಮರಿಯಪ್ಪನ್ ತಂಗವೇಲು ಪುರುಷರ ವಿಭಾಗದ ಟಿ-42 ರ ಎತ್ತರ ಜಿಗಿತ ವಿಭಾಗದಲ್ಲಿ ಚಿನ್ನದ ಪದಕ ಜಯಿಸಿದ್ದರು.

click me!