ಮೂಗುತಿ ಸುಂದರಿ ಸಾನಿಯಾ ಮಡಿಲಿಗೆ ಗಂಡು ಕೂಸು !

Published : Oct 30, 2018, 10:03 AM IST
ಮೂಗುತಿ ಸುಂದರಿ ಸಾನಿಯಾ ಮಡಿಲಿಗೆ ಗಂಡು ಕೂಸು !

ಸಾರಾಂಶ

ನಮಗೆ ಗಂಡು ಮಗುವಾಗಿದೆ ಎಂದು ತಿಳಿಸಲು ಅತೀವ ಸಂತೋಷವಾಗುತ್ತಿದೆ. ತಾಯಿ-ಮಗು ಆರೋಗ್ಯವಾಗಿದ್ದಾರೆ, ಎಲ್ಲರ ಪ್ರಾರ್ಥನೆ ಹಾರೈಕೆಗಳಿಗೆ ನಾವು ಆಭಾರಿಗಳಾಗಿದ್ದೇವೆ ಎಂದು ಮಲಿಕ್ ಟ್ವೀಟ್ ಮಾಡಿದ್ದಾರೆ.

ಹೈದರಾಬಾದ್[ಅ.30]: ಭಾರತದ ಟೆನಿಸ್ ತಾರೆ, ಮೂಗುತಿ ಸುಂದರಿ ಸಾನಿಯಾ ಮಿರ್ಜಾ-ಪಾಕಿಸ್ತಾನದ ಕ್ರಿಕೆಟಿಗ ಶೋಯೆಬ್ ಮಲಿಕ್ ದಂಪತಿಗೆ ಗಂಡು ಮಗು ಜನಿಸಿದೆ. ಈ ವಿಚಾರವನ್ನು ಮಲ್ಲಿಕ್ ಟ್ವಿಟರ್’ನಲ್ಲಿ ಖಚಿತ ಪಡಿಸಿದ್ದಾರೆ.

ನಮಗೆ ಗಂಡು ಮಗುವಾಗಿದೆ ಎಂದು ತಿಳಿಸಲು ಅತೀವ ಸಂತೋಷವಾಗುತ್ತಿದೆ. ತಾಯಿ-ಮಗು ಆರೋಗ್ಯವಾಗಿದ್ದಾರೆ, ಎಲ್ಲರ ಪ್ರಾರ್ಥನೆ ಹಾರೈಕೆಗಳಿಗೆ ನಾವು ಆಭಾರಿಗಳಾಗಿದ್ದೇವೆ ಎಂದು ಮಲಿಕ್ ಟ್ವೀಟ್ ಮಾಡಿದ್ದಾರೆ.

ಸಾನಿಯಾ-ಮಲಿಕ್ ಜೋಡಿ 2010ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಇದೇ ಏಪ್ರಿಲ್ ತಿಂಗಳಲ್ಲಿ ಸಾನಿಯಾ ಗರ್ಭಿಣಿಯಾಗಿರುವುದನ್ನು ಖಚಿತಪಡಿಸಿದ್ದರು. ಹೀಗಾಗಿ ಕೆಲವು ತಿಂಗಳುಗಳಿಂದಲೇ ಟೆನಿಸ್’ನಿಂದ ಹೊರಗುಳಿದಿದ್ದರು. 2020ರ ಟೋಕಿಯೊ ಒಲಿಂಪಿಕ್ಸ್ ವೇಳೆಗೆ ಸಾನಿಯಾ ಕಣಕ್ಕಿಳಿಯುವ ಸಾಧ್ಯತೆಯಿದೆ.   
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ವಿಶ್ವದಾಖಲೆ ಬರೆದ ರೋಹಿತ್ ಶರ್ಮಾ; ಈ ದಾಖಲೆ ಮುರಿಯಲು ಕೊಹ್ಲಿ, ಬಟ್ಲರ್‌ಗೂ ಸಾಧ್ಯವಿಲ್ಲ!
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್; ಸಂಗಕ್ಕಾರ ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ!