
ನವದೆಹಲಿ(ನ.23): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಘೋಷಿಸಬೇಕೆಂಬ ಒತ್ತಡ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾಜಿ ಕ್ರಿಕೆಟಿಗ, ವೀಕ್ಷಕ ವಿವರಣೆಗಾರ ಸಂಜಯ್ ಮಾಂಜ್ರೇಕರ್ ಸಹ ಧೋನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
‘ಧೋನಿ ಇದೀಗ ಮ್ಯಾಚ್ ವಿನ್ನರ್ ಆಗಿ ಉಳಿದಿಲ್ಲ. ಅವರಿಗಿಂತ ಚೆನ್ನಾಗಿ ಆಡಬಲ್ಲ ಆಟಗಾರರು ತಂಡದಿಂದ ಹೊರಗೆ ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದಿದ್ದಾರೆ ಅವರನ್ನು ತಂಡಕ್ಕೆ ಸೇರಿಸುವ ಬಗ್ಗೆ ಚಿಂತಿಸಬೇಕಾದ ಕಾಲ ಬಂದಿದೆ. ಈ ಕುರಿತು ಆರೋಗ್ಯಕರ ಚರ್ಚೆ ನಡೆಯಲಿ, ಆಕ್ರೋಶ ವ್ಯಕ್ತಪಡಿಸುವುದು ಬೇಡ’ ಎಂದು ವೆಬ್'ಸೈಟ್'ವೊಂದಕ್ಕೆ ಬರೆದ ಅಂಕಣವೊಂದರಲ್ಲಿ ಮಾಂಜ್ರೇಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಾಂಜ್ರೇಕರ್ ಅವರ ಈ ಹೇಳಿಕೆಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿವೆ. ಧೋನಿ ಸದ್ಯ ಕ್ರಿಕೆಟ್ ಆಡಲು ಸಮರ್ಥರಾಗಿದ್ದಾರೆ. ಮಾಜಿ ಆಟಗಾರ ಮಾಂಜ್ರೇಕರ್ ಅವರಿಂದ ಈ ತರಹದ ಹೇಳಿಕೆಗಳನ್ನು ನಿರೀಕ್ಷಿಸಿರಲಿಲ್ಲ ಎಂದು ಮಾಜಿ ಕ್ರಿಕೆಟಿಗರು ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.