ಹಲವರಿಗೆ ವಿಶ್ರಾಂತಿ; ಧೋನಿ ನಿರ್ಧಾರಕ್ಕೆ ಕಾಯುತ್ತಿದೆ BCCI!

Published : Jul 12, 2019, 11:21 AM ISTUpdated : Jul 12, 2019, 11:23 AM IST
ಹಲವರಿಗೆ ವಿಶ್ರಾಂತಿ; ಧೋನಿ ನಿರ್ಧಾರಕ್ಕೆ ಕಾಯುತ್ತಿದೆ BCCI!

ಸಾರಾಂಶ

ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಆಯ್ಕೆ ಸಮಿತಿ ಮುಂಬೈನಲ್ಲಿ ಸಭೆ ಸೇರಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ತಂಡ ಆಯ್ಕೆ ಮಾಡಲು ಕಸರತ್ತು ಆರಂಭಿಸಿದೆ. ಹಲವು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಿದೆ.

ಮುಂಬೈ(ಜು.12): ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹೋರಾಟ ಅಂತ್ಯಗೊಂಡಿದ್ದು, ಇದೀಗ ವೆಸ್ಟ್ ಇಂಡೀಸ್ ಪ್ರವಾಸದತ್ತ ಟೀಂ ಇಂಡಿಯಾ ಆಯ್ಕೆ ಸಮತಿ ಚಿತ್ತ ಹರಿಸಿದೆ. ವಿಶ್ವಕಪ್ ಟೂರ್ನಿಯಲ್ಲಿ ಭಾರತ ದಿಟ್ಟ ಹೋರಾಟ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದರೂ, ಬಿಸಿಸಿಐಗೆ ತೃಪ್ತಿಯಾಗಿಲ್ಲ. ಆಗಸ್ಟ್ 3 ರಿಂದ ಆರಂಭಗೊಳ್ಳಲಿರುವು ವೆಸ್ಟ್ ಇಂಡೀಸ್ ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಲು ಬಿಸಿಸಿಆ ಮುಂದಾಗಿದೆ.

ಇದನ್ನೂ ಓದಿ: ವಿಶ್ವಕಪ್ ಸೋಲಿನ ಬೆನ್ನಲ್ಲೇ ವಿಂಡೀಸ್ ಪ್ರವಾಸಕ್ಕೆ ಭಾರತಕ್ಕೆ ಸಿದ್ಧತೆ!

ಸತತ ಕ್ರಿಕೆಟ್‌ನಿಂದ ಬಳಲಿರುವ ಕ್ರಿಕೆಟಿಗರಿಗೆ ವಿಶ್ರಾಂತಿ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ. ಆದರೆ ಎಂ.ಎಸ್.ಧೋನಿ ನಿರ್ಧಾರಕ್ಕಾಗಿ ಬಿಸಿಸಿಐ ಕಾಯುತ್ತಿದೆ. ಧೋನಿ ನಿವೃತ್ತಿ ಹೇಳಲಿದ್ದಾರೆ ಅನ್ನೋ ಮಾತುಗಳು ಬಲವಾಗಿ ಕೇಳಿಬರುತ್ತಿದೆ. ಹೀಗಾಗಿ ಗೊಂದಲಕ್ಕೆ ಬಿದ್ದಿರುವ ಆಯ್ಕೆ ಸಮಿತಿ ಧೋನಿ ಬಳಿ ನಿವೃತ್ತಿ ಊಹಾಪೋಹ ಖಚಿತಪಡಿಸಿ ತಂಡ ಪ್ರಕಟಿಸಲು ನಿರ್ಧರಿಸಿದೆ.

ಇದನ್ನೂ ಓದಿ: ಇಂಗ್ಲೆಂಡ್ vs ನ್ಯೂಜಿಲೆಂಡ್ ವಿಶ್ವಕಪ್ ಫೈನಲ್; ಯಾರೂ ಗೆದ್ದರೂ ಇತಿಹಾಸ!

ನಾಯಕ ವಿರಾಟ್ ಕೊಹ್ಲಿ, ವೇಗಿ ಜಸ್ಪ್ರೀತ್ ಬುಮ್ರಾ ಸೇರಿದಂತೆ ಹಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ಮುಂದಾಗಿದೆ. ಜುಲೈ 17 ಅಥವಾ 18 ರಂದು ಮುಂಬೈನಲ್ಲಿ ಎಂ.ಎಸ್.ಕೆ.ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಸಭೆ ಸೇರಲಿದೆ. ವೆಸ್ಟ್ ಇಂಡೀಸ್ ವಿರುದ್ಧ ಆಗಸ್ಟ್ 3 ರಿಂದ 3 ಟಿ20, 3 ಏಕದಿನ ಹಾಗೂ ಏಕೈಕ ಟೆಸ್ಟ್ ಪಂದ್ಯದ  ಸರಣಿ ಆಡಲಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?