
ಮುಂಬೈ(ಜು.09): ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಯ್ಕೆ ಪ್ರಕ್ರಿಯೆಯಲ್ಲಿ ಸಂದರ್ಶನ ಭಾಗವನ್ನು ಕೈ ಬಿಡಲು ಬಿಸಿಸಿಐ ಚಿಂತನೆ ನಡೆಸಿದೆ. ಹಿರಿಯರ ತಂಡದಿಂದ ಹೊರಬಿದ್ದ ಬಳಿಕ ಸಿಎಸಿ ಸದಸ್ಯ ಸೌರವ್ ಗಂಗೂಲಿ ಹಾಗೂ ತಂಡದ ಮಾಜಿ ನಿರ್ದೇಶಕ ರವಿ ಶಾಸ್ತ್ರಿ ನಡುವೆ ಕಳೆದ ವರ್ಷ ಮಾತಿನ ಚಕಮಕಿ ನಡೆದಿತ್ತು. ಇಂಥ ಅಹಿತರ ಘಟನೆ ಪುನರಾರ್ವತನೆ ಆಗದಂತೆ ಮುನ್ನೆಚ್ಚರಿಕೆ ವಹಿಸಿರುವ ಬಿಸಿಸಿಐ ಈ ಬಗ್ಗೆ ಚಿಂತನೆ ನಡೆಸಿದೆ.
ಸಿಎಸಿ ಸದಸ್ಯರಾದ ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್ ಹಾಗೂ ಸೌರವ್ ಗಂಗೂಲಿ ಅವರೇ ಹೊಸ ತರಬೇತಿದಾರರ ನೇಮಕ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲ್ಲಿ ಎಂದು ಟೀಂ ಇಂಡಿಯಾ ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ. ಟೀಂ ಇಂಡಿಯಾ ನಾಯಕ ವಿರಾಟ್ ಕೋಹ್ಲಿ ಹಾಗೂ ತಂಡದ ಹಿರಿಯ ಆಟಗಾರರ ವಿರೋಧದ ಹಿನ್ನೆಲೆಯಲ್ಲಿ ಅನಿಲ್ ಕುಂಬ್ಳೆ ಕೋಚ್ ಹುದ್ದೆಯ ರೇಸ್‌ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
'ಗಂಗೂಲಿ ಹಾಗೂ ರವಿ ಶಾಸ್ತ್ರಿ ಅವರನ್ನೇ ಪುನರಾವರ್ತಿಸಬಾರದು ಎಂದು ಬೋರ್ಡ್ ಸದಸ್ಯರು ಅಭಿಪ್ರಾಯಪಟ್ಟಿದ್ದು, ಶೀಘ್ರದಲ್ಲಿಯೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕ್ರಿಕೆಟ್ ಮಂಡಳಿಯ ಉನ್ನತ ಮೂಲಗಳು ತಿಳಿಸಿವೆ. ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಜುಲೈ 9 ಕೊನೆಯ ದಿನ. ಅನಿಲ್ ಕುಂಬ್ಳೆ ರಾಜೀನಾಮೆ ನೀಡಿದ ಬಳಿಕ ಕೋಚ್ ಹುದ್ದೆಗೆ ಭಾರತೀಯ ಕ್ರಿಕೆಟ್ ಮಂಡಳಿ ಎರಡನೇ ಬಾರಿ ಅರ್ಜಿ ಆಹ್ವಾನಿಸಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.