
ನವದೆಹಲಿ(ನ.09): 2019ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಪಂದ್ಯಾವಳಿಯವರೆಗೆ ಮಹೇಂದ್ರ ಸಿಂಗ್ ಧೋನಿಯವರನ್ನೇ ಭಾರತ ತಂಡದ ನಾಯಕರನ್ನಾಗಿ ಮುಂದುವರಿಸಲು ಬಿಸಿಸಿಐ ಆಯ್ಕೆ ಮಂಡಳಿ ಚಿಂತನೆ ನಡೆಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಹೇಳಿದೆ.
ಸದ್ಯಕ್ಕೆ ಟೀಂ ಇಂಡಿಯಾದಲ್ಲಿರುವ ಅಗ್ರ ಕ್ರಮಾಂಕವನ್ನು ಯಾವುದೇ ಕಾರಣಕ್ಕೂ ಬದಲಿಸದಿರಲು ನಿರ್ಧರಿಸಲಾಗಿದ್ದು, ಮುಂದಿನ ವಿಶ್ವಕಪ್‌ನಲ್ಲಿ ಇದೇ ಕ್ರಮಾಂಕದಲ್ಲೇ ಟೀಂ ಇಂಡಿಯಾ ಮುಂದುವರಿಯಬೇಕೆಂಬ ಇಚ್ಛೆಯನ್ನು ಆಯ್ಕೆ ಮಂಡಳಿ ಹೊಂದಿದೆ.
2019ರೊಳಗೆ ಧೋನಿ ನಿವೃತ್ತಿ ಘೋಷಿಸದಿರಲಿ ಎಂಬ ಆಶಾಭಾವನೆಯನ್ನು ಖುದ್ದು ಆಯ್ಕೆ ಮಂಡಳಿ ಸದಸ್ಯರೇ ಹೇಳಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದಾಗಿ ವರದಿಯಲ್ಲಿ ಹೇಳಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.