
ಪ್ಯಾರಿಸ್: ತಾಯಿಯಾದ ಬಳಿಕ ಮೊದಲ ಬಾರಿಗೆ ಗ್ರ್ಯಾಂಡ್‌ಸ್ಲಾಂನಲ್ಲಿ ಆಡುತ್ತಿರುವ ಅಮೆರಿಕದ ಸೆರೆನಾ ವಿಲಿಯಮ್ಸ್ ಫ್ರೆಂಚ್ ಓಪನ್‌ನಲ್ಲಿ ಶುಭಾರಂಭ ಮಾಡಿದ್ದಾರೆ. ಮಂಗಳವಾರ ಮಹಿಳಾ ಸಿಂಗಲ್ಸ್ ಮೊದಲ ಸುತ್ತಿನಲ್ಲಿ ಚೆಕ್ ಗಣರಾಜ್ಯದ ಕ್ರಿಸ್ಟಿನಾ ಪ್ಲಿಸ್ಕೊವಾ ವಿರುದ್ಧ 7-6, 6-4 ನೇರ ಸೆಟ್‌ಗಳಲ್ಲಿ ಸುಲಭ ಗೆಲುವು ಸಾಧಿಸಿದರು. ಪುರುಷರ ಸಿಂಗಲ್ಸ್ ಮೊದಲ ಸುತ್ತಿನಲ್ಲಿ ವಿಶ್ವ ನಂ.1 ರಾಫೆಲ್ ನಡಾಲ್ ಇಟಲಿಯ ಸಿಮೊನ್ ವಿರುದ್ಧ 6-4, 6-2, 7-6 ರಲ್ಲಿ ಗೆದ್ದರು. ಸೋಮವಾರ ಆರಂಭಗೊಂಡಿದ್ದ ಪಂದ್ಯ 3 ನೇ ಸೆಟ್ ಚಾಲ್ತಿಯಲ್ಲಿದ್ದಾಗ ಮಳೆಯಿಂದಾಗಿ ರದ್ದಾಗಿತ್ತು.
ಭಾಂಬ್ರಿಗೆ ಸೋಲು, ಬೋಪಣ್ಣ ಜೋಡಿಗೆ ಜಯ: ಭಾರತದ ಯೂಕಿ ಭಾಂಬ್ರಿ ಪುರುಷರ ಸಿಂಗಲ್ಸ್ ಮೊದಲ ಸುತ್ತಿನಲ್ಲೇ ಸೋಲುಂಡರು. ಬೆಲ್ಜಿಯಂನ ಬೆಮೆಲ್ಮನ್ಸ್ ವಿರುದ್ಧ 4-6, 4-6, 1-6 ಸೆಟ್ಗಳಲ್ಲಿ ಪರಾಭವಗೊಂಡು ಹೊರಬಿದ್ದರು. ಇದೇ ವೇಳೆ ಪುರುಷರ ಡಬಲ್ಸ್‌ನಲ್ಲಿ ಭಾರತದ ರೋಹನ್ ಬೋಪಣ್ಣ ಹಾಗೂ ಫ್ರಾನ್ಸ್‌ನ ರೋಜರ್ ವ್ಯಾಸಲಿನ್ ಜೋಡಿ ಗೆಲುವಿನ ಆರಂಭ ಪಡೆದು 2ನೇ ಸುತ್ತಿಗೇರಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.