ICC ಏಕದಿನ ಆಲ್ರೌಂಡರ್ ರ‍್ಯಾಂಕಿಂಗ್ ಪ್ರಕಟ: ಅಗ್ರ 10ರಲ್ಲಿ ಭಾರತೀಯರಿಗಿಲ್ಲ ಸ್ಥಾನ

Published : May 23, 2019, 10:12 AM IST
ICC ಏಕದಿನ ಆಲ್ರೌಂಡರ್ ರ‍್ಯಾಂಕಿಂಗ್ ಪ್ರಕಟ: ಅಗ್ರ 10ರಲ್ಲಿ ಭಾರತೀಯರಿಗಿಲ್ಲ ಸ್ಥಾನ

ಸಾರಾಂಶ

ICC ಏಕದಿನ ಕ್ರಿಕೆಟ್’ನ ನೂತನ ಆಲ್ರೌಂಡರ್ ಶ್ರೇಯಾಂಕ ಪಟ್ಟಿ ಪ್ರಕಟಗೊಂಡಿದ್ದು, ಆಪ್ಘಾನಿಸ್ತಾನದ ಆಲ್ರೌಂಡರ್ ರಶೀದ್ ಖಾನ್ ಹಿಂದಿಕ್ಕಿ ಬಾಂಗ್ಲಾದೇಶದ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಅಗ್ರಸ್ಥಾನಕ್ಕೇರಿದ್ದಾರೆ. ಆದರೆ ಭಾರತೀಯರು ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. 

ದುಬೈ[ಮೇ.23]: ಐಸಿಸಿ ಏಕದಿನ ಆಲ್ರೌಂಡರ್‌ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಬುಧವಾರ ಬಿಡುಗಡೆಗೊಳಿಸಿದ್ದು, ಆಫ್ಘಾನಿಸ್ತಾನದ ರಶೀದ್ ಖಾನ್‌ರನ್ನು ಹಿಂದಿಕ್ಕಿದ ಬಾಂಗ್ಲಾದೇಶದ ಅನುಭವಿ ಆಟಗಾರ ಶಕೀಬ್ ಅಲ್ ಹಸನ್ ಅಗ್ರಸ್ಥಾನಕ್ಕೇರಿದ್ದಾರೆ. ಆದರೆ, ಅಗ್ರ 10ರಲ್ಲಿ ಟೀಂ ಇಂಡಿಯಾದ ಯಾವೊಬ್ಬ ಆಟಗಾರರು ಸ್ಥಾನ ಪಡೆದಿಲ್ಲ.

ಏಕದಿನ ವಿಶ್ವಕಪ್‌ಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ಕೇದಾರ್ ಜಾಧವ್, ದಕ್ಷಿಣ ಆಫ್ರಿಕಾದ ಆ್ಯಂಡಿಲೆ ಫೆಹ್ಲುಕ್ವಾಯೊ ಹಾಗೂ ಇಂಗ್ಲೆಂಡ್‌ನ ಮೋಯಿನ್ ಅಲಿ ಜಂಟಿಯಾಗಿ 12ನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಶಕೀಬ್ ಮೊದಲ ಸ್ಥಾನದಲ್ಲಿದ್ದರೆ, ರಶೀದ್ ಖಾನ್ ಹಾಗೂ ಮೊಹಮ್ಮದ್ ನಬಿ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿದ್ದಾರೆ

ಪಾಕಿಸ್ತಾನದ ಇಬ್ಬರು ಆಟಗಾರರು ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇಮಾದ್ ವಾಸೀಂ ನಾಲ್ಕನೇ ಸ್ಥಾನದಲ್ಲಿದ್ದರೆ, ಮೊಹಮ್ಮದ್ ಹಫೀಜ್ ಏಳನೇ ಸ್ಥಾನದಲ್ಲಿದ್ದಾರೆ. ಹಾರ್ದಿಕ್ ಪಾಂಡ್ಯ 20ನೇ ರ‍್ಯಾಂಕಿಂಗ್‌ಗೆ ತೃಪಿಪಟ್ಟುಕೊಂಡಿದ್ದಾರೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆ ಸ್ಟಾರ್ ಆಲ್‌ರೌಂಡರ್‍‌ನ‌ ತ್ಯಾಗದ ಜೊತೆಗೆ 10 ಕೋಟಿ ಆಫರ್! ಆದ್ರೂ ಚೆನ್ನೈ ಪ್ಲಾನ್‌ಗೆ ಶಾಕ್ ಕೊಟ್ಟ ಮುಂಬೈ
IND vs ZIM 2nd T20I: ಹೊಸ ಚಾನೆಲ್‌ನಲ್ಲಿ ನೇರ ಪ್ರಸಾರ, ಆದ್ರೆ ಭಾರತ-ಜಿಂಬಾಬ್ವೆ ಮ್ಯಾಚ್ ಫ್ರೀ ಆಗಿ ವೀಕ್ಷಿಸೋದು ಹೇಗೆ? ಇಲ್ಲಿದೆ ಡೀಟೈಲ್ಸ್