
ಮೆಲ್ಬೋರ್ನ್(ಡಿ.22): ಪ್ರಸ್ತುತ ತಲೆಮಾರಿನ ಕ್ರಿಕೆಟಿಗರಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಇಬ್ಬರೂ ಶ್ರೇಷ್ಠ ಬ್ಯಾಟ್ಸ್'ಮನ್'ಗಳಾಗಿದ್ದು, ಟೆಸ್ಟ್ ಕ್ರಿಕೆಟ್'ನಲ್ಲಿ ಕೊಹ್ಲಿಗಿಂತ ಸ್ಮಿತ್ ಶ್ರೇಷ್ಠ ಬ್ಯಾಟ್ಸ್'ಮನ್ ಎಂದು ಕ್ರಿಕೆಟ್ ದಂತಕಥೆ ಶೇನ್ ವಾರ್ನ್ ಅಭಿಪ್ರಾಯಪಟ್ಟಿದ್ದಾರೆ.
ನನ್ನ ಪ್ರಕಾರ ವಿರಾಟ್ ಕೊಹ್ಲಿ ಮೂರೂ ಮಾದರಿಯ ಕ್ರಿಕೆಟ್'ನಲ್ಲಿ ಶ್ರೇಷ್ಠ ಬ್ಯಾಟ್ಸ್'ಮನ್. ಆದಾಗ್ಯೂ ಸ್ಮಿತ್ ಟೆಸ್ಟ್ ಕ್ರಿಕೆಟ್'ನಲ್ಲಿ ಕೊಹ್ಲಿಗಿಂತ ಮೇಲ್ಪಂಕ್ತಿಯಲ್ಲಿ ನಿಲ್ಲುತ್ತಾರೆ ಎಂದು ವಾರ್ನ್ ಹೇಳಿದ್ದಾರೆ.
ಕೊಹ್ಲಿ 2014ರ ಇಂಗ್ಲೆಂಡ್ ಪ್ರವಾಸದ ವೇಳೆ ಬ್ಯಾಟಿಂಗ್'ನಲ್ಲಿ ವಿಫಲವಾಗಿದ್ದರು. ಆದರೆ ಸ್ಮಿತ್ ಇಂಗ್ಲೆಂಡ್'ನಲ್ಲಿ ನಡೆಯುತ್ತಿರುವ ಆ್ಯಷಸ್ ಟೂರ್ನಿಯಲ್ಲಿ 43.31ರ ಸರಾಸರಿಯಲ್ಲಿ 3 ಶತಕ ಬಾರಿಸಿದ್ದಾರೆ. ಇದನ್ನು ಆಧಾರವಾಗಿಟ್ಟುಕೊಂಡು ವಾರ್ನ್ ಆಸೀಸ್ ನಾಯಕನನ್ನು ಟೆಸ್ಟ್'ನ ಶ್ರೇಷ್ಠ ಬ್ಯಾಟ್ಸ್'ಮನ್ ಎಂದಿದ್ದಾರೆ ಎನ್ನಲಾಗುತ್ತಿದೆ.
ಸ್ಟೀವ್ ಸ್ಮಿತ್ ಪ್ರಸ್ತುತ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.