
ಮುಂಬೈ(ಜೂ.1): ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಅವರಿಗೆ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸಮನ್ ಶಿಖರ್ ಧವನ್ ಜಮೈಖಾದ ದಲೇರ್ ಮೆಹಂದಿ ಎಂದು ಹೊಸ ಹೆಸರನ್ನಿಟ್ಟಿದ್ದಾರೆ.
ಐಪಿಎಲ್ ಪಂದ್ಯಾವಳಿ ನಂತರ ನಡೆದ ಸಮಾರಂಭದಲ್ಲಿ ಕ್ರಿಸ್ ಗೇಲ್ ಅವರನ್ನು ಭೇಟಿಯಾದ ಫೋಟೋವನ್ನು ಶಿಖರ್ ಸಾಮಾಜಿಕ ಜಾಲ ತಾಣದಲ್ಲಿ ಶೇರ್ ಮಾಡಿದ್ದಾರೆ. ನಾನು ಜಮೈಖಾದ ದಲೇರ್ ಮೆಹಂದಿ ಅವರನ್ನು ಭೇಟಿಯಾಗಿದ್ದಾಗಿ ಶಿಖರ್ ಹೇಳಿದ್ದಾರೆ. ಅಲ್ಲದೇ ಮೈದಾನದ ಒಳಗೂ ಮತ್ತು ಮೈದಾನದ ಹೊರಗೂ ಗೇಲ್ ಅವರ ಆತ್ಮೀಯ ಗೆಳೆತನವನ್ನು ಶಿಖರ್ ನೆನೆದಿದ್ದಾರೆ.
ಈ ಬಾರಿಯ ಐಪಿಎಲ್ ಪಂದ್ಯಾವಳಿಯಲ್ಲಿ ಕ್ರಿಸ್ ಗೇಲ್ ಕಿಂಗ್ಸ್ ಇಲೆವನ್ ಪಂಜಾಬ್ ಪರ ಆಡಿದ್ದರೆ, ಶಿಖರ್ ಧವನ್ ಸನ್ ರೖಸರ್ಸ್ ಹೈದರಾಬಾದ್ ಪರ ಆಡಿದ್ದರು. 11 ಪಂದ್ಯಗಳನ್ನಾಡಿದ್ದ ಗೇಲ್ 368 ರನ್ ಬಾರಿಸಿದ್ದರೆ, ಶಿಖರ್ 16 ಪಂದ್ಯಗಳಿಂದ 497 ರನ್ ಸಿಡಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.