
ನವದೆಹಲಿ[ಸೆ.26]: ವೆಸ್ಟ್‌ಇಂಡೀಸ್ ವಿರುದ್ಧ ಅ.4ರಿಂದ ಆರಂಭಗೊಳ್ಳಲಿರುವ 2 ಪಂದ್ಯಗಳ ಟೆಸ್ಟ್ ಸರಣಿಗೆ ಬುಧವಾರ ಇಲ್ಲಿ ಭಾರತ ತಂಡದ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಕರ್ನಾಟಕದ ಪ್ರತಿಭೆ ಮಯಾಂಕ್ ಅಗರ್’ವಾಲ್’ಗೆ ಆಯ್ಕೆ ಸಮಿತಿ ಅವಕಾಶ ನೀಡುವ ಸಾಧ್ಯತೆಯಿದೆ.
ದೇಶಿ ಕ್ರಿಕೆಟ್’ನಲ್ಲಿ ಭರ್ಜರಿ ರನ್ ಕಲೆಹಾಕುತ್ತಿರುವ ಮಯಾಂಕ್ ರಾಷ್ಟ್ರೀಯ ತಂಡದ ಕದ ತಟ್ಟುತ್ತಿದ್ದಾರೆ. 43 ಪ್ರಥಮ ದರ್ಜೆ ಪಂದ್ಯಗಳಲ್ಲಿ ಸರಿಸುಮಾರು 50ರ ಸರಾಸರಿಯಲ್ಲಿ 3372 ರನ್ ಚಚ್ಚಿದ್ದಾರೆ. ಹೀಗಾಗಿ ಈ ಬಾರಿ ಆಯ್ಕೆ ಸಮಿತಿ ಮಯಾಂಕ್ ಅಗರ್’ವಾಲ್’ಗೆ ಅವಕಾಶ ನೀಡಬಹುದು ಎನ್ನಲಾಗುತ್ತಿದೆ. ಟೆಸ್ಟ್‌ನಲ್ಲಿ ಶಿಖರ್ ಧವನ್‌ರ ಲಯದ ಕೊರತೆ ಪ್ರಮುಖ ಚರ್ಚಾ ವಿಷಯವಾಗಿದೆ. ಇಂಗ್ಲೆಂಡ್ ಕೌಂಟಿಯಲ್ಲಿ ಮುರಳಿ ವಿಜಯ್ ರನ್ ಗಳಿಸುತ್ತಿದ್ದರೂ, ಅವರನ್ನು ತಂಡಕ್ಕೆ ವಾಪಸ್ ಕರೆತರುವ ಸಾಧ್ಯತೆ ಕಡಿಮೆ ಇದೆ.
ಇಂಗ್ಲೆಂಡ್ ವಿರುದ್ಧ ಕೊನೆ 2 ಟೆಸ್ಟ್‌ಗೆ ಆಯ್ಕೆಯಾಗಿದ್ದ ಪೃಥ್ವಿ ಶಾಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ. ರಾಜ್‌ಕೋಟ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ನಲ್ಲಿ ಅವರು ಪಾದಾರ್ಪಣೆ ಮಾಡುವ ಸಾಧ್ಯತೆ ಇದೆ. ಇಶಾಂತ್ ಹಾಗೂ ಅಶ್ವಿನ್ ಗಾಯಗೊಂಡಿದ್ದು, ಇಬ್ಬರಿಗೂ ವಿಶ್ರಾಂತಿ ನೀಡಲಾಗುವುದು ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.