
ಮುಂಬೈ(ಸೆ.14): ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಆಸ್ಟ್ರೇಲಿಯಾ ವಿರುದ್ಧದ ಮೊದಲ 3 ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಧವನ್ ಪತ್ನಿ ಆಯೇಷಾ ಮುಖರ್ಜಿ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನಲೆಯಲ್ಲಿ ಮೊದಲ ಮೂರು ಪಂದ್ಯಗಳಿಂದ ಎಡಗೈ ಬ್ಯಾಟ್ಸ್'ಮನ್ ಹೊರಗುಳಿದಿದ್ದಾರೆ.
ಈ ಮೊದಲ ತಾಯಿಗೆ ಅನಾರೋಗ್ಯದ ಹಿನ್ನಲೆಯಲ್ಲಿ ಧವನ್, ಶ್ರೀಲಂಕಾ ವಿರುದ್ಧದ ಏಕೈಕ ಟಿ20 ಪಂದ್ಯದಿಂದಲೂ ಹೊರಗುಳಿದಿದ್ದರು.
ಚಾಂಪಿಯನ್ಸ್ ಟ್ರೋಫಿಯಿಂದಲೂ ಅದ್ಭುತ ಫಾರ್ಮ್'ನಲ್ಲಿರುವ ಧವನ್ ಶ್ರೀಲಂಕಾ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಭರ್ಜರಿ ಪ್ರದರ್ಶನ ತೋರುವ ಮೂಲಕ ಸರಣಿ ಕ್ಲೀನ್ ಸ್ವೀಪ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಇದೀಗ ಧವನ್ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ಜೊತೆ ಕನ್ನಡಿಗ ಕೆ.ಎಲ್. ರಾಹುಲ್ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯು ಆರಂಭವಾಗಲಿದ್ದು, ಸೆಪ್ಟೆಂಬರ್ 17ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ಮೊದಲ ಪಂದ್ಯ ನಡೆಯಲಿದೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.