ರಾವಲ್ಪಿಂಡಿ ಎಕ್ಸ್’ಪ್ರೆಸ್ ಶೋಯೆಬ್ ಅಖ್ತರ್’ಗಿಂದು ಹುಟ್ಟುಹಬ್ಬದ ಸಂಭ್ರಮ

Published : Aug 13, 2018, 05:43 PM ISTUpdated : Sep 09, 2018, 08:33 PM IST
ರಾವಲ್ಪಿಂಡಿ ಎಕ್ಸ್’ಪ್ರೆಸ್ ಶೋಯೆಬ್ ಅಖ್ತರ್’ಗಿಂದು ಹುಟ್ಟುಹಬ್ಬದ ಸಂಭ್ರಮ

ಸಾರಾಂಶ

ಮಾರಕ ಹಾಗೂ ಕರಾರುವಕ್ಕಾದ ದಾಳಿಯ ಮೂಲಕ ಎದುರಾಳಿ ತಂಡದ ಬ್ಯಾಟ್ಸ್’ಮನ್’ಗಳ ಎದೆಯಲ್ಲಿ ನಡುಕ ಹುಟ್ಟಿಸುತ್ತಿದ್ದ ಅಖ್ತರ್. 2003ರ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 161.3 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದು, ಇಂದಿಗೂ ವಿಶ್ವದಾಖಲೆಯಾಗಿಯೇ ಉಳಿದಿದೆ. 

ಕರಾಚಿ[ಆ.13]: ಕ್ರಿಕೆಟ್ ಜಗತ್ತು ಕಂಡ ಸಾರ್ವಕಾಲಿಕ ವೇಗದ ಬೌಲರ್, ರಾವಲ್ಪಿಂಡಿ ಎಕ್ಸ್’ಪ್ರೆಸ್ ಖ್ಯಾತಿಯ ಶೋಯೆಬ್ ಅಖ್ತರ್ ಇಂದು 43ನೇ ವಸಂತಕ್ಕೆ ಕಾಲಿರಿಸಿದ್ದಾರೆ.   

ಮಾರಕ ಹಾಗೂ ಕರಾರುವಕ್ಕಾದ ದಾಳಿಯ ಮೂಲಕ ಎದುರಾಳಿ ತಂಡದ ಬ್ಯಾಟ್ಸ್’ಮನ್’ಗಳ ಎದೆಯಲ್ಲಿ ನಡುಕ ಹುಟ್ಟಿಸುತ್ತಿದ್ದ ಅಖ್ತರ್. 2003ರ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 161.3 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದು, ಇಂದಿಗೂ ವಿಶ್ವದಾಖಲೆಯಾಗಿಯೇ ಉಳಿದಿದೆ. ವೆಸ್ಟ್’ಇಂಡಿಸ್ ವಿರುದ್ಧ 1997ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ ಅಖ್ತರ್ ಒಟ್ಟು ಪಾಕಿಸ್ತಾದ ಪರ ಮೂರು ಮಾದರಿಯ ಕ್ರಿಕೆಟ್’ನಿಂದ 224 ಪಂದ್ಯಗಳನ್ನಾಡಿ 444 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಇನ್ನು ಅಖ್ತರ್ 2008ರ ಐಪಿಎಲ್’ನಲ್ಲಿ ಕೋಲ್ಕತಾ ನೈಟ್’ರೈಡರ್ಸ್ ತಂಡವನ್ನು ಪ್ರತಿನಿಧಿಸಿದ್ದರು.  ಹೀಗಿತ್ತು ಅಖ್ತರ್ ಎಸೆದ ಅತಿವೇಗದ ಬೌಲಿಂಗ್..

ಅಖ್ತರ್ ಹುಟ್ಟುಹಬ್ಬಕ್ಕೆ ಟೀಂ ಇಂಡಿಯಾ ಕ್ರಿಕೆಟಿಗ ಹರ್ಭಜನ್ ಸಿಂಗ್ ಸೇರಿದಂತೆ ಹಲವರು ಶುಭಕೋರಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Mock Auction: 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್‌ಗೆ ಕ್ಯಾಮರೂನ್‌ ಗ್ರೀನ್‌!
ಐಪಿಎಲ್ ಹರಾಜು ಇತಿಹಾಸದಲ್ಲೇ ಟಾಪ್ 6 ದುಬಾರಿ ಆಟಗಾರರಿವರು!