
ನವದೆಹಲಿ(ಸೆ.23): ಕ್ರಿಕೆಟ್ ಮೈದಾನದಲ್ಲಿ ಭಾರತ- ಪಾಕಿಸ್ತಾನ ತಂಡಗಳು ಬದ್ಧ ವೈರಿಗಳಂತೆ ಕಾದಾಡುತ್ತಾರೆ ಎನ್ನುವ ವಿಷಯ ಎಲ್ಲರಿಗೂ ತಿಳಿದಿದೆ, ಎರಡು ತಂಡಗಳ ಆಟಗಾರು ಮೈದಾನದಲ್ಲಿ ಆಕ್ರಮಣಕಾರಿ ಪ್ರದರ್ಶನ ನೀಡುವುದು ಸಾಮಾನ್ಯವಾಗಿದೆ. ಇದೇ ಮಾದರಿಯಲ್ಲಿ 2010ರ ಏಷ್ಯಾ ಕಪ್ ನಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.
ಏಪ್ಯಾ ಕಪ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 267 ರನ್ ದಾಖಲಿಸಿತ್ತು. ಇದಕ್ಕೆ ಉತ್ತರವಾಗಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಿತ್ತು. ಆದರೆ ಟೀಮ್ ಇಂಡಿಯಾಕ್ಕೆ ಕೊನೆಯ ಎರಡು ಓವರ್ಗಳಲ್ಲಿ 16 ರನ್'ಗಳ ಅವಶ್ಯಕತೆ ಇತ್ತು. ಈ ಸಂದರ್ಭದಲ್ಲಿ ಸುರೇಶ್ ರೈನಾ ಮತ್ತು ಹರ್ಭಜನ್ ಸಿಂಗ್ ಬ್ಯಾಟಿಂಗ್ ನಡೆಸುತ್ತಿದ್ದರು.
ಈ ಸಂದರ್ಭದಲ್ಲಿ ಭಜ್ಜಿಗೆ ಬೌನ್ಸರ್ ಹಾಕಿದ ಪಾಕಿಸ್ತಾನದ ವೇಗಿ ಶೋಯಬ್ ಆಕ್ತರ್, ಹರ್ಭಜನ್ ಅವರನ್ನು ಕೆಣಕಿದ್ದಾರೆ. ಇದರಿಂದ ರೊಚ್ಚಿಗೆದ್ದ ಭಜ್ಜಿ ಕೊನೆಯಲ್ಲಿ ಸಿಕ್ಸರ್ ಸಿಡಿಸುವ ಮೂಲಕ ಅಕ್ತರ್'ಗೆ ಭರ್ಜರಿಯಾಗಿ ಉತ್ತರ ನೀಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.