
ಟೀಂ ಇಂಡಿಯಾ ಕಂಡ ಅತ್ಯಂತ ಯಶಸ್ವಿ ಆಲ್ರೌಂಡರ್, ಸಿಕ್ಸರ್ ಕಿಂಗ್, ಕ್ಯಾನ್ಸರ್ ಮಣಿಸಿದ ಕೆಚ್ಚೆದೆಯ ವೀರ, ಟಿ20 ಹಾಗೂ ಏಕದಿನ ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯುವರಾಜ್ ಸಿಂಗ್ ಇಂದು 36ನೇ ವಸಂತಕ್ಕೆ ಕಾಲಿರಿಸಿದ್ದಾರೆ.
ಅದ್ಭುತ ಕ್ಷೇತ್ರರಕ್ಷಣೆಯ ಮೂಲಕ ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದ ಯುವಿ, 2007ರ ಚೊಚ್ಚಲ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ 6 ಎಸೆತಗಳಲ್ಲಿ 6 ಸಿಕ್ಸರ್ ಚಚ್ಚಿದ್ದನ್ನು, ಕೇವಲ 12 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದನ್ನು ಯಾರು ಮರೆಯಲು ಸಾಧ್ಯವಿಲ್ಲ. ಹಾಗೆಯೇ 2011ರ ವಿಶ್ವಕಪ್ ಟೂರ್ನಿಯಲ್ಲೂ ಅಭೂತಪೂರ್ವ ಆಲ್ರೌಂಡ್ ಪ್ರದರ್ಶನದ ಮೂಲಕ 28 ವರ್ಷಗಳ ಬಳಿಕ ಟೀಂ ಇಂಡಿಯಾ ಪ್ರಶಸ್ತಿ ಗೆಲ್ಲಲು ಯುವಿ ಪ್ರಮುಖ ಪಾತ್ರ ವಹಿಸಿದ್ದರು.
ಇದಾದ ಬಳಿಕ ಮಹಮಾರಿ ಕ್ಯಾನ್ಸರ್ ಮಣಿಸಿ ಟೀಂ ಇಂಡಿಯಾಗೆ ಮತ್ತೆ ಕಮ್'ಬ್ಯಾಕ್ ಮಾಡಿದ ಯುವಿ ಮತ್ತೊಮ್ಮೆ ಟೀಂ ಇಂಡಿಯಾ ಅಭಿಮಾನಿಗಳ ಹೃದಯ ಗೆದ್ದರು ಎಂದರೆ ಅತಿಶಯೋಕ್ತಿಯಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.