KKR ಗೆ ಸುಲಭ ಗುರಿ ನೀಡಿದ ರಾಯಲ್ಸ್

Published : Apr 07, 2019, 09:47 PM IST
KKR ಗೆ ಸುಲಭ ಗುರಿ ನೀಡಿದ ರಾಯಲ್ಸ್

ಸಾರಾಂಶ

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ರಾಜಸ್ಥಾನ ಆರಂಭದಲ್ಲೇ ನಾಯಕ ಅಜಿಂಕ್ಯ ರಹಾನೆ ವಿಕೆಟ್ ಕಳೆದುಕೊಂಡಿತು. ಕನ್ನಡಿಗ ಪ್ರಸಿದ್ಧ್ ಕೃಷ್ಣ ಕೆಕೆಆರ್’ಗೆ ಆರಂಭಿಕ ಯಶಸ್ಸು ತಂದಿತ್ತರು. ಆ ಬಳಿಕ ಜತೆಯಾದ ವಿಕೆಟ್’ಕೀಪರ್ ಬ್ಯಾಟ್ಸ್’ಮನ್ ಜೋಸ್ ಬಟ್ಲರ್-ಸ್ಟೀವ್ ಸ್ಮಿತ್ ಜೋಡಿ 2ನೇ ವಿಕೆಟ್’ಗೆ 72 ರನ್’ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಯಿತು.

ಜೈಪುರ[ಏ.07]: ಸ್ಟೀವ್ ಸ್ಮಿತ್ ಆಕರ್ಷಕ ಅರ್ಧಶತಕದ ಹೊರತಾಗಿಯೂ ಕೋಲ್ಕತಾ ನೈಟ್’ರೈಡರ್ಸ್ ಸಂಘಟಿತ ಬೌಲಿಂಗ್ ಪ್ರದರ್ಶನದ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡವನ್ನು ಕೇವಲ 139 ರನ್’ಗಳಿಗೆ ನಿಯಂತ್ರಿಸಿದೆ.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ರಾಜಸ್ಥಾನ ಆರಂಭದಲ್ಲೇ ನಾಯಕ ಅಜಿಂಕ್ಯ ರಹಾನೆ ವಿಕೆಟ್ ಕಳೆದುಕೊಂಡಿತು. ಕನ್ನಡಿಗ ಪ್ರಸಿದ್ಧ್ ಕೃಷ್ಣ ಕೆಕೆಆರ್’ಗೆ ಆರಂಭಿಕ ಯಶಸ್ಸು ತಂದಿತ್ತರು. ಆ ಬಳಿಕ ಜತೆಯಾದ ವಿಕೆಟ್’ಕೀಪರ್ ಬ್ಯಾಟ್ಸ್’ಮನ್ ಜೋಸ್ ಬಟ್ಲರ್-ಸ್ಟೀವ್ ಸ್ಮಿತ್ ಜೋಡಿ 2ನೇ ವಿಕೆಟ್’ಗೆ 72 ರನ್’ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಯಿತು. ಬಟ್ಲರ್ 34 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಿತ 37 ರನ್ ಬಾರಿಸಿ ಗುರ್ನೆಗೆ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಎಚ್ಚರಿಕೆ ಬ್ಯಾಟ್ ಬೀಸಿದ ಸ್ಮಿತ್ 59 ಎಸೆತಗಳಲ್ಲಿ 7 ಬೌಂಡರಿ, ಒಂದು ಸಿಕ್ಸರ್ ಸಹಿತ ಅಜೇಯ 73 ರನ್ ಚಚ್ಚಿದರು. ಕೊನೆಯಲ್ಲಿ ಸ್ಟೋಕ್ಸ್ 14 ಎಸೆತಗಳನ್ನು ಎದುರಿಸಿ ಕೇವಲ 7 ರನ್ ಬಾರಿಸಿದರು.

ಕೆಕೆಆರ್ ಪರ ಹೆನ್ರಿ ಗುರ್ನೆ 2 ವಿಕೆಟ್ ಪಡೆದರೆ, ಪ್ರಸಿದ್ಧ್ ಕೃಷ್ಣ 1 ವಿಕೆಟ್ ಪಡೆದರು. 

ಸಂಕ್ಷಿಪ್ತ ಸ್ಕೋರ್:

ರಾಜಸ್ಥಾನ ರಾಯಲ್ಸ್: 139/3  
ಸ್ಟೀವ್ ಸ್ಮಿತ್: 25/2
ಗುರ್ನೆ: 25/2
[ವಿವರ ಅಪೂರ್ಣ]

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರೈಸ್ಟ್‌ಚರ್ಚ್ ಪವಾಡ: ಕಿವೀಸ್ ಎದುರು ಐತಿಹಾಸಿಕ ಡ್ರಾ ಸಾಧಿಸಿದ ವೆಸ್ಟ್ ಇಂಡೀಸ್!
20 ಮ್ಯಾಚ್ ಬಳಿಕ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!