ಬಿಸಿಸಿಐ ಚುನಾವಣಾ ಕಣಕ್ಕೆ ಸೌರವ್‌, ಅಜರ್‌!

Published : Oct 06, 2019, 01:49 PM IST
ಬಿಸಿಸಿಐ ಚುನಾವಣಾ ಕಣಕ್ಕೆ ಸೌರವ್‌, ಅಜರ್‌!

ಸಾರಾಂಶ

ಬಿಸಿಸಿಐ ಅಧ್ಯಕ್ಷ ಹುದ್ದೆಯ ಮೇಲೆ ಕರ್ನಾಟಕದ ಬ್ರಿಜೇಶ್ ಪಟೇಲ್, ಮಾಜಿ ನಾಯಕರಾದ ಸೌರವ್ ಗಂಗೂಲಿ ಹಾಗೂ ಮೊಹಮ್ಮದ್ ಅಜರುದ್ದೀನ್ ಕಣ್ಣಿಟ್ಟಿದ್ದಾರೆ. ಅಕ್ಟೋಬರ್ 23ರಂದು ಬಿಸಿಸಿಐ ಚುನಾವಣೆ ನಡೆಯಲಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಮುಂಬೈ(ಅ.06): ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯ​ಕ​ರಾದ ಸೌರವ್‌ ಗಂಗೂಲಿ, ಮೊಹಮ್ಮದ್‌ ಅಜರುದ್ದೀನ್‌ ಹಾಗೂ ಮಾಜಿ ಕ್ರಿಕೆ​ಟಿಗ, ರಾಜ್ಯ ಕ್ರಿಕೆಟ್‌ ಸಂಸ್ಥೆಯ ಮಾಜಿ ಕಾರ್ಯ​ದ​ರ್ಶಿ ಬ್ರಿಜೇಶ್‌ ಪಟೇಲ್‌ ಅ.23ರಂದು ನಡೆಯುವ ಬಿಸಿಸಿಐ ಅಧ್ಯಕ್ಷೀಯ ಚುನಾವಣಾ ಕಣದಲ್ಲಿ ಎದುರಾಗುವ ಸಾಧ್ಯತೆಯಿದೆ. 

ಮೊಹಮ್ಮದ್ ಅಜರುದ್ದೀನ್‌ಗೆ ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಪಟ್ಟ!

ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆಗೆ ಎಲ್ಲಾ ರಾಜ್ಯ ಕ್ರಿಕೆಟ್‌ ಸಂಸ್ಥೆಗಳಿಗೂ ತಮ್ಮ ಪ್ರತಿನಿಧಿ ಆಯ್ಕೆಗೆ ಶುಕ್ರವಾರ ಕೊನೆಯ ದಿನವಾಗಿತ್ತು. ಸಭೆಯಲ್ಲಿ ರಾಜ್ಯ ಕ್ರಿಕೆಟ್‌ ಸಂಸ್ಥೆ ಪ್ರತಿನಿಧಿಸಿದವರೇ ವಿವಿಧ ಹುದ್ದೆಗಳಿಗೆ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ. ಬಿಸಿಸಿಐ ಚುನಾವಣಾಧಿಕಾರಿ ಎನ್‌.ಗೋಪಾಲಸ್ವಾಮಿ ಅಂತಿಮ ಪಟ್ಟಿಯನ್ನು ಅ.10ಕ್ಕೆ ಬಿಡುಗಡೆಗೊಳಿಸಲಿದ್ದಾರೆ.

ತಮಿಳುನಾಡು ಕ್ರಿಕೆಟ್‌ಗೆ ಶ್ರೀನಿ ಮಗಳು ಅಧ್ಯಕ್ಷೆ!

ಇತ್ತೀಚೆಗಷ್ಟೇ ರಾಜ್ಯ ಕ್ರಿಕೆಟ್ ಸಂಸ್ಥೆಗಳ ಚುನಾವಣೆಯಲ್ಲಿ ಸೌರವ್ ಗಂಗೂಲಿ ಬಂಗಾಳ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಇನ್ನು ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಚುನಾವಣೆಯಲ್ಲಿ ಮೊಹಮ್ಮದ್ ಅಜರುದ್ದೀನ್ ಅನಾಯಾಸವಾಗಿ ಅಧ್ಯಕ್ಷ ಸ್ಥಾನಕ್ಕೇರಿದ್ದರು. ಟೀಂ ಇಂಡಿಯಾ ಕಂಡ ಯಶಸ್ವಿ ನಾಯಕರೆನಿಸಿಕೊಂಡಿದ್ದ ಗಂಗೂಲಿ ಹಾಗೂ ಅಜರುದ್ದೀನ್ ಬಿಸಿಸಿಐ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕದನ ಕುತೂಹಲವನ್ನು ಹೆಚ್ಚಿಸಿದೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಕದನ; ಭಾರತಕ್ಕಿದೆ ಬಿಗ್ ಚಾಲೆಂಜ್!
ರಶ್ಮಿಕಾ- ಸ್ಮೃತಿ ಇಬ್ಬರ ಎಂಗೇಜ್​ಮೆಂಟೂ ಮುರಿದುಬಿತ್ತು: ಮಂದಣ್ಣ- ಮಂಧಾನ ಹೆಸರಲ್ಲಿ ಏನಿದೆ ಗ್ರಹಚಾರ?