2011 ಹಾಗೂ 2015ರ ವಿಶ್ವಕಪ್ ಟೂರ್ನಿಯಲ್ಲಿ ತಂಡದ ಕೀ ಪ್ಲೇಯರ್ ಆಗಿದ್ದ ಸೌತ್ಆಫ್ರಿಕಾ ಆಲ್ರೌಂಡರ್ ವಿದಾಯ ನಿರ್ಧಾರ ಪ್ರಕಟಿಸಿದ್ದಾರೆ. ಸದ್ಯ ಶ್ರೀಲಂಕಾ ವಿರುದ್ದದ ಏಕದಿನ ಪಂದ್ಯ ಆಡುತ್ತಿರುವ ಆ ಸ್ಟಾರ್ ಕ್ರಿಕೆಟಿಗ ಯಾರು? ಇಲ್ಲಿದೆ ವಿವರ.
ಜೋಹಾನ್ಸ್‌ಬರ್ಗ್(ಮಾ.15): 2019ರ ವಿಶ್ವಕಪ್ ಟೂರ್ನಿ ಬಳಿಕ ಏಕದಿನ ಮಾದರಿಯಿಂದ ನಿವೃತ್ತಿಯಾಗೋದಾಗಿ ಸೌತ್ಆಫ್ರಿಕಾ ಆಲ್ರೌಂಡರ್ ಜೆಪಿ ಡುಮಿನಿ ನಿರ್ಧಾರ ಪ್ರಕಟಿಸಿದ್ದಾರೆ. ಈಗಾಗಲೇ ಟೆಸ್ಟ್ ಹಾಗೂ ಫಸ್ಟ್ ಕ್ಲಾಸ್ ಕ್ರಿಕೆಟ್‌ಗೆ ವಿದಾಯ ಹೇಳಿರುವ ಡುಮಿನಿ, ವಿಶ್ವಕಪ್ ಟೂರ್ನಿ ಬಳಿಕ ಟಿ20 ಕ್ರಿಕೆಟ್‌ಗೆ ಲಭ್ಯರಿದ್ದಾರೆ.
ಇದನ್ನೂ ಓದಿ: ಕ್ರಿಕೆಟ್ ಅಭಿಮಾನಗಳಿಗೆ ಸಿಹಿ ಸುದ್ದಿ ನೀಡಿದ ಡಿವಿಲಿಯರ್ಸ್!
undefined
2004ರಲ್ಲಿ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಜೆಪಿ ಡುಮಿನಿ 2011 ಹಾಗೂ 2015ರ ವಿಶ್ವಕಪ್ ಟೂರ್ನಿಯಲ್ಲಿ ಸೌತ್ಆಫ್ರಿಕಾ ತಂಡದ ಭಾಗವಾಗಿದ್ದರು. ಸದ್ಯ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸೌತ್ಆಫ್ರಿಕಾ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಇದನ್ನೂ ಓದಿ: ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸೌತ್ ಆಫ್ರಿಕಾ ಸ್ಪಿನ್ನರ್ ಇಮ್ರಾನ್ ತಾಹೀರ್
ಕ್ರಿಕೆಟಿಗ ಅಥವಾ ಯಾವುದೇ ಕ್ರೀಡಾಪಟುವಿಗೆ ನಿವೃತ್ತಿ ನಿರ್ಧಾರ ತೆಗೆದುಕೊಳ್ಳುವುದು ಅತ್ಯಂತ ಕಷ್ಟದ ಕೆಲಸ. ಕೆಲವೊಮ್ಮೆ ಕಠಿಣ ನಿರ್ಧಾರಗಳನ್ನು ಕೈಗೊಳ್ಳಲೇಬೇಕಿದೆ. ವಿಶ್ವಕಪ್ ಟೂರ್ನಿ ಬಳಿಕ ಅಂತಾರಾಷ್ಟ್ರೀಯ ಟಿ20 ಹಾಗೂ ಲೀಗ್ ಕ್ರಿಕೆಟ್ ಟೂರ್ನಿಗಳಲ್ಲಿ ಮುಂದುವರಿಯುವುದಾಗಿ ಡುಮಿನಿ ಹೇಳಿದ್ದಾರೆ.