
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಕ್ರೀಡಾ ಪತ್ರಕರ್ತ ಸತೀಶ್ ಪೌಲ್ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಟೈಮ್ಸ್ ಆಫ್ ಇಂಡಿಯಾ, ಬೆಂಗಳೂರು ಮಿರರ್ ಸೇರಿದಂತೆ ಹಲವು ಇಂಗ್ಲೀಷ್ ಪತ್ರಿಕೆಗಳಲ್ಲಿ ಸತೀಶ್ ಪೌಲ್ ಕ್ರೀಡಾ ವರದಿಗಾರನಾಗಿ ಸೇವೆ ಸಲ್ಲಿಸಿದ್ದರು.
ಪತ್ರಕರ್ತರಾಗಿ 28 ವರ್ಷಗಳ ಅನುಭವ ಹೊಂದಿದ್ದ ಸತೀಶ್ ಪೌಲ್, ಕ್ರಿಕೆಟ್, ಟೆನಿಸ್, ಗಾಲ್ಫ್ ಸೇರಿದಂತೆ ಹಲವು ಕ್ರೀಡೆಗಳ ವರದಿ ಮಾಡಿ ಜನಪ್ರೀಯರಾಗಿದ್ದರು. ಇಂದು ಸಂಜೆ 4 ಗಂಟೆಗೆ ಸತೀಶ್ ಪೌಲ್ ಅಂತ್ಯಕ್ರೀಯೆ ನಡಯೆಲಿದೆ. ಹಿರಿಯ ಕ್ರೀಡಾ ಪತ್ರಕರ್ತರ ನಿಧನಕ್ಕೆ ಬೆಂಗಳೂರು ಕ್ರೀಡಾ ಬರಹಗಾರರ ಸಂಸ್ಥೆ ಸಂತಾಪ ಸೂಚಿಸಿದೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.