
ನವದೆಹಲಿ(ನ.18): ಇತ್ತೀಚೇಗಷ್ಟೇ ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್'ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಾಕಿ ಇಂಡಿಯಾ ಮುಖ್ಯಸ್ಥ ನರೀಂದರ್ ಬಾತ್ರಾ ಅವರಿಗೆ ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯೆಲ್ ಅಭಿನಂದನೆ ಸಲ್ಲಿಸಿದ್ದಾರೆ.
ಎಫ್'ಐಎಚ್ ಅಧ್ಯಕ್ಷ ಸ್ಥಾನಕ್ಕೇರಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಬಾತ್ರಾ ಪಾತ್ರರಾಗಿದ್ದಾರೆ. ಬಾತ್ರಾ ನಾಯಕತ್ವದಲ್ಲಿ ಹಾಕಿ ವಿಶ್ವದೆಲ್ಲೆಡೆ ಪಸರಿಸಲಿದೆ ಎಂದು ವಿಜಯ್ ಗೋಯೆಲ್ ಹೇಳಿದ್ದಾರೆ.
ಸದ್ಯ ಕೆಲವೊಂದು ರಾಷ್ಟ್ರಗಳಲ್ಲಿ ಮಾತ್ರ ಹಾಕಿ ಕ್ರೀಡೆಯನ್ನು ಆಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಾತ್ರಾ ಅಧ್ಯಕ್ಷತೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡೆ ಗಣನೀಯವಾಗಿ ಏರಿಕೆ ಕಾಣುವ ವಿಶ್ವಾಸವಿದೆ ಎಂದು ಸಚಿವರು ಹೇಳಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.