SRH ಟೂರ್ನಿಯಿಂದ ಔಟ್- ಬಿಕ್ಕಿ ಬಿಕ್ಕಿ ಅತ್ತ ಕೋಚ್ ಟಾಮ್ ಮೂಡಿ!

Published : May 09, 2019, 02:47 PM IST
SRH ಟೂರ್ನಿಯಿಂದ ಔಟ್- ಬಿಕ್ಕಿ ಬಿಕ್ಕಿ ಅತ್ತ ಕೋಚ್ ಟಾಮ್ ಮೂಡಿ!

ಸಾರಾಂಶ

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದದ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಸೋಲು ಕಾಣುತ್ತಿದ್ದಂತೆ ಕೋಚ್ ಟಾಮ್ ಮೂಡಿ ಬಿಕ್ಕಿ ಬಿಕ್ಕಿ ಅತ್ತ ವೀಡಿಯೋ ವೈರಲ್ ಆಗಿದೆ.

ವಿಶಾಖಪಟ್ಟಣಂ(ಮೇ.09): 12ನೇ ಆವೃತ್ತಿ ಐಪಿಎಲ್ ಟೂರ್ನಿಯಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಹೊರಬಿದ್ದಿದೆ.  ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ SRH ವಿರೋಚಿತ ಸೋಲು ಕಂಡಿದೆ. ರಿಷಬ್ ಪಂತ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ SRH ಸೋಲಿಗೆ ಶರಣಾಗಿದೆ. ಡೆಲ್ಲಿ ವಿರುದ್ದ SRH ಸೋಲು ಕಾಣುತ್ತಿದ್ದಂತೆ ಡಗೌಟ್‌ನಲ್ಲಿ ಕುಳಿತಿದ್ದ ಕೋಚ್ ಟಾಮ್ ಮೂಡಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಇದನ್ನೂ ಓದಿ: ಟ್ವಿಟರ್‌ ಐಪಿಎಲ್‌ ತಂಡ ಪ್ರಕಟ -ಕೊಹ್ಲಿ, ಧೋನಿಗೆ ಸ್ಥಾನ

ಕೀಮೊ ಪೌಲ್ ಬೌಂಡರಿ ಸಿಡಿಸುತ್ತಿದ್ದಂತೆ ಡೆಲ್ಲಿ ಗೆಲುವಿನ ಸಂಭ್ರಮ ಆಚರಿಸಿತು. ಆದರೆ SRH ಕೋಚ್ ಟಾಮ್ ಮೂಡಿಗೆ ನೋವು ತಡೆದುಕೊಳ್ಳಲು ಸಾಧ್ಯವಾಗಲಿಲ್ಲ. ಗೆಲುವಿಗೆ ಅತ್ಯತ್ತಮ ಅವಕಾಶ SRH ತಂಡಕ್ಕಿದ್ದರೂ ಫಲಿತಾಂಶ ಮಾತ್ರ ಭಿನ್ನವಾಗಿತ್ತು. ಟಾಮ್ ಮೂಡಿ ಬಿಕ್ಕಿ ಬಿಕ್ಕಿ ಅತ್ತ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

 

ಇದನ್ನೂ ಓದಿ: CSK Vs MI: ಗೆಲುವಿನ ಬಳಿಕ ಧೋನಿ ಕುರಿತು ಹಾರ್ದಿಕ್ ಟ್ವೀಟ್!

ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ 8 ವಿಕೆಟ್ ನಷ್ಟಕ್ಕೆ 162 ರನ್ ಸಿಡಿಸಿತು. ಇದಕ್ಕುತ್ತರವಾಗಿ ಡೆಲ್ಲಿ 19.5 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್, 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಪ್ರವೇಶ ಪಡೆದರೆ, ಹೈದರಾಬಾದ್ ಟೂರ್ನಿಯಿಂದ ಹೊರಬಿತ್ತು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Lionel Messi India visit: ರಾಹುಲ್ ಗಾಂಧಿಗೆ ಟಿ-ಶರ್ಟ್ ಉಡುಗೊರೆ ನೀಡಿದ ಮೆಸ್ಸಿ!
ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?