
ಕ್ಯಾನ್’ಬೆರಾ[ಫೆ.02]: ಆಸ್ಟ್ರೇಲಿಯಾದ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಬೌನ್ಸರ್ ದಾಳಿಗೆ ಶ್ರೀಲಂಕಾದ ಆರಂಭಿಕ ಬ್ಯಾಟ್ಸ್’ಮನ್ ದಿಮುತ್ ಕರುಣರತ್ನೆ ತೀವ್ರವಾಗಿ ಗಾಯಗೊಂಡು ನೆಲಕ್ಕುರುಳಿದರು. ತಕ್ಷಣವೇ ಅವರನ್ನು ಸ್ಟ್ರೆಚ್ಚಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಆಸ್ಟ್ರೇಲಿಯಾ-ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್’ನ ಎರಡನೇ ದಿನದಾಟದಲ್ಲಿ ಈ ಅವಘಡ ಸಂಭವಿಸಿದ್ದು, 142 ಕಿ.ಮೀ ವೇಗದಲ್ಲಿ ಎಸೆದ ಚಂಡು ನೇರವಾಗಿ ಕರುಣರತ್ನೆ ಕುತ್ತಿಗೆಗೆ ಬಡಿದಿದೆ. ಇದಾದ ಕೆಲವೇ ಕ್ಷಣಗಳಲ್ಲಿ ಎಡಗೈ ಬ್ಯಾಟ್ಸ್’ಮನ್ ನೆಲಕ್ಕುರುಳಿದರು. ತಕ್ಷಣವೇ ಅವರನ್ನು ಆಸಿಸ್ ವೈದ್ಯಕೀಯ ಸಿಬ್ಬಂದಿ ಸ್ಟ್ರೆಚ್ಚಸ್ ಮೂಲಕ ಕರೆದುಕೊಂಡು ಹೋದರು.
ಹೀಗಿತ್ತು ನೋಡಿ ಆ ಕ್ಷಣ..
ಕರಣರತ್ನೆ ಕ್ರೀಸ್ ತೊರೆಯುವ ಮುನ್ನ 84 ಎಸೆತಗಳನ್ನು ಎದುರಿಸಿ 5 ಬೌಂಡರಿ ಸಹಿತ 46 ರನ್ ಸಿಡಿಸಿದ್ದರು. ಈ ವೇಳೆ ಶ್ರೀಲಂಕಾ ವಿಕೆಟ್ ನಷ್ಟವಿಲ್ಲದೇ 82 ರನ್ ಗಳಿಸಿತ್ತು. ಇದಾದ ಬಳಿಕ ಎರಡನೇ ದಿನದಂತ್ಯಕ್ಕೆ ಶ್ರೀಲಂಕಾ 3 ವಿಕೆಟ್ ಕಳೆದುಕೊಂಡು 123 ರನ್ ಬಾರಿಸಿದೆ. ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 5 ವಿಕೆಟ್ ಕಳೆದುಕೊಂಡು 534 ರನ್ ಬಾರಿಸಿ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.