
ನವದೆಹಲಿ(ಆ.29): ಶ್ರೀಲಂಕಾದ ಸ್ಪಿನ್ನರ್ ಅಜಂತಾ ಮೆಂಡಿಸ್ ಬುಧವಾರ ಎಲ್ಲಾ ಮಾದರಿ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಕೇರಂ ಬಾಲ್‌ನಿಂದ ಪ್ರಸಿದ್ಧಿ ಪಡೆದಿದ್ದ ಅವರು, ಶಂಕಾಸ್ಪದ ಬೌಲಿಂಗ್ ಶೈಲಿ ಸುಳಿಯಲ್ಲೂ ಸಿಲುಕಿದ್ದರು.
ಕೊನೆಗೂ ನಿವೃತ್ತಿ ಹೇಳಿದ 85ರ ಹರೆಯದ ವಿಂಡೀಸ್ ವೇಗಿ!
34 ವರ್ಷದ ಮೆಂಡಿಸ್, 2008ರ ಏಷ್ಯಾ ಕಪ್ ಫೈನಲ್‌ನಲ್ಲಿ ಭಾರತ ವಿರುದ್ಧ 13 ರನ್‌ಗೆ 6 ವಿಕೆಟ್ ಕಬಳಿಸಿ ಜನಪ್ರಿಯಗೊಂಡಿದ್ದರು. ಏಕದಿನದಲ್ಲಿ ಅತಿವೇಗದ 50 ವಿಕೆಟ್, ಅಂತಾರಾಷ್ಟ್ರೀಯ ಟಿ20ಯಲ್ಲಿ 2 ಬಾರಿ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ಕಬಳಿಸಿದ ದಾಖಲೆ ಬರೆದಿದ್ದರು. ಅಲ್ಲದೇ ಟೆಸ್ಟ್, ಏಕದಿನ ಹಾಗೂ ಟಿ20 ಕ್ರಿಕೆಟ್’ನಲ್ಲಿ 6 ವಿಕೆಟ್ ಪಡೆದ ಏಕೈಕ ಬೌಲರ್ ಎನ್ನುವ ದಾಖಲೆಯೂ ಮೆಂಡಿಸ್ ಹೆಸರಿನಲ್ಲಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ ಹಾಶೀಂ ಆಮ್ಲಾ
ಲಂಕಾ ಪರ 19 ಟೆಸ್ಟ್‌ಗಳಲ್ಲಿ 70 ವಿಕೆಟ್ ಪಡೆದಿದ್ದ ಅವರು, 87 ಏಕದಿನಗಳಲ್ಲಿ 152 ವಿಕೆಟ್ ಕಿತ್ತಿದ್ದರು. 39 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿದ್ದ ಅವರು 66 ವಿಕೆಟ್ ಉರುಳಿಸಿದ್ದರು. ಐಪಿಎಲ್ನಲ್ಲಿ ಕೆಕೆಆರ್ ತಂಡದ ಪರ ಅವರು ಆಡಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.