ಏಕದಿನ ಪಂದ್ಯಕ್ಕೂ ಮುನ್ನ ಬೆಚ್ಚಿ ಬಿದ್ದ ಇಂಗ್ಲೆಂಡ್-ಕ್ರೀಸ್‌ನಲ್ಲಿ ಹಾವು ಪ್ರತ್ಯಕ್ಷ!

Published : Oct 16, 2018, 10:11 AM IST
ಏಕದಿನ ಪಂದ್ಯಕ್ಕೂ ಮುನ್ನ ಬೆಚ್ಚಿ ಬಿದ್ದ ಇಂಗ್ಲೆಂಡ್-ಕ್ರೀಸ್‌ನಲ್ಲಿ ಹಾವು ಪ್ರತ್ಯಕ್ಷ!

ಸಾರಾಂಶ

ಶ್ರೀಲಂಕಾ ಹಾಗೂ ಇಂಗ್ಲೆಂಡ್ ನಡುವಿನ 3ನೇ ಅಭ್ಯಾಸಕ್ಕೂ ಮುನ್ನ ಆಂಗ್ಲರು ಬೆಚ್ಚಿಬಿದ್ದಿದ್ದಾರೆ. ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಇಂಗ್ಲೆಂಡ್ ತಂಡ ಮೈದಾನಕ್ಕಿಳಿಯುತ್ತಿದ್ದಂತೆ ಹಾವು ಕಾಣಿಸಿಕೊಂಡಿದೆ. 

ಕೊಲಂಬೊ(ಅ.16): ಕ್ರಿಕೆಟ್ ಮೈದಾನಕ್ಕೆ ನಾಯಿ ಲಗ್ಗೆ ಇಟ್ಟು ಪಂದ್ಯ ಸ್ಥಗಿತಗೊಂಡ ಉದಾಹರಣೆಗಳಿವೆ. ಆದರೆ ಇದೀಗ ಕ್ರೀಡಾಂಗಣಕ್ಕೆ ಹಾವು ಎಂಟ್ರಿಯಾಗೋ ಮೂಲಕ ಆಟಗಾರರಲ್ಲಿ ಆತಂಕ ಮೂಡಿಸಿದ ಘಟನೆ ಶ್ರೀಲಂಕಾದಲ್ಲಿ ನಡೆದಿದೆ.

ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯಕ್ಕಾಗಿ ಪ್ರವಾಸಿ ಇಂಗ್ಲೆಂಡ್ ತಂಡದ ಆಟಗಾರರ ಪೂರ್ವಭಾವಿ ಅಭ್ಯಾಸದಲ್ಲಿ ನಿರತರಾಗಿದ್ದ ವೇಳೆಯಲ್ಲಿ ಮೈದಾನದಲ್ಲಿ ಹಾವೊಂದು ಕಾಣಿಸಿಕೊಂಡಿದೆ.  ಸ್ಪಿನ್ನರ್ ಮೊಯಿನ್ ಅಲಿ, ಆದಿಲ್ ರಶೀದ್ ಮತ್ತು ಡಾಸನ್ ಅಭ್ಯಾಸ ನಡೆಸುತ್ತಿದ್ದ ಜಾಗದಲ್ಲಿ ಹಾವು ಪ್ರತ್ಯಕ್ಷವಾಗಿದೆ. 

 

 

ಆ ಬಳಿಕ ಮೈದಾನದ ಸಿಬ್ಬಂದಿ ಹಾವು ಹಿಡಿದು ಹೊರಬಿಟ್ಟಿದ್ದಾರೆ. ಹಾವಿನ ಫೋಟೋವನ್ನು ಇಂಗ್ಲೆಂಡ್ ಕ್ರಿಕೆಟ್ ತನ್ನ ಟ್ವೀಟರ್‌ನಲ್ಲಿ ಪೋಸ್ಟ್ ಮಾಡಿದ್ದು, ವೈರಲ್ ಆಗಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ
ಸೌತ್ ಆಫ್ರಿಕಾ ವಿರುದ್ದ 3ನೇ ಟಿ20 ಗೆದ್ದ ಟೀಂ ಇಂಡಿಯಾ, ಸರಣಿಯಲ್ಲಿ 2-1 ಮುನ್ನಡೆ