
ಮುಂಬೈ(ಜೂ.2): ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಗೆ ಓರ್ವ ಕ್ರಿಕೆಟಿಗನ ಮೇಲೆ ಕ್ರಷ್ ಆಗಿದೆ ಅಂತೆ. ಐಪಿಎಲ್ ಫ್ರಾಂಚೈಸಿ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲೀಕ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಗೆ ಕೆಕೆಆರ್ ತಂಡದ ಆಟಗಾರ, ಐಸಿಸಿ ಅಂಡರ್ 19 ವಿಶ್ವಕಪ್ ವಿಜೇತ ತಂಡದ ಆಟಗಾರ ಶುಭ್‌ಮನ್ ಗಿಲ್ ಮೇಲೆ ಕ್ರಶ್ ಆಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ಕೆಕೆಆರ್ ಪಂದ್ಯಗಳ ವೇಳೆ ಶಾರುಖ್ ಖಾನ್ ಹಾಗೂ ಪುತ್ರಿ ಸುಹಾನಾ ಸಹ ಕ್ರೀಡಾಂಗಣಕ್ಕೆ ಆಗಮಿಸಿ ಆಟಗಾರರ ಉತ್ಸಾಹವನ್ನು ಹೆಚ್ಚಿಸುತ್ತಿದ್ದರು. ಇನ್ನು ಪಂದ್ಯಗಳ ವೇಳೆ ಶುಭ್‌ಮನ್ ಗಿಲ್ ಅವರ ಅಬ್ಬರದ ಬ್ಯಾಟಿಂಗ್ ಗೆ ಸುಹಾನಾ ಫಿದಾ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.
ಐಸಿಸಿ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿನ ಶುಭ್‌ಮನ್ ಗಿಲ್ ಅತ್ಯುತ್ತಮ ಆಟವನ್ನು ನೋಡಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಅವರನ್ನು 1.8 ಕೋಟಿಗೆ ಖರೀದಿ ಮಾಡಿತ್ತು. ಇದೀಗ ಗಿಲ್ ಮೇಲೆ ಸುಹಾನಾ ಅವರಿಗೆ ಕ್ರಶ್ ಆಗಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದಕ್ಕೆ ಶಾರುಖ್ ಯಾವ ರೀತಿ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.