
ಬೆಂಗಳೂರು(ಜ.06): ಗ್ರಾಮೀಣ ಕ್ರೀಡಾಪ್ರತಿಭೆಗಳನ್ನು ಹೆಚ್ಚು ಗಮನದಲ್ಲಿಟ್ಟುಕೊಂಡು ರಾಜ್ಯ ಒಲಿಂಪಿಕ್ ಸಂಸ್ಥೆ, ದೇಶದಲ್ಲಿಯೇ ಮೊದಲ ಬಾರಿಗೆ 2019ರ ಜುಲೈ-ಆಗಸ್ಟ್ ನಲ್ಲಿ ರಾಜ್ಯ ಮಿನಿ ಒಲಿಂಪಿಕ್ಸ್‌ನ್ನು ಆಯೋಜಿಸಲು ನಿರ್ಧರಿಸಿದೆ ಎಂದು ಕರ್ನಾಟಕ ರಾಜ್ಯ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಕೆ. ಗೋವಿಂದರಾಜ್ ತಿಳಿಸಿದರು.
ಶನಿವಾರ ಇಲ್ಲಿನ ಕಂಠೀರವ ಕ್ರೀಡಾಂಗಣದ ಒಲಿಂಪಿಕ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗೋವಿಂದರಾಜ್, ‘ಮಿನಿ ಒಲಿಂಪಿಕ್ಸ್ ಕ್ರೀಡಾಕೂಟ ರಾಜ್ಯದ ಯುವ ಹಾಗೂ ಗ್ರಾಮೀಣ ಪ್ರತಿಭೆಗಳನ್ನು ಉತ್ತೇಜಿಸಲಿದೆ. ಸಾಕಷ್ಟು ಕ್ರೀಡಾ ಪ್ರತಿಭೆಗಳು ಸೂಕ್ತ ವೇದಿಕೆಗಳಿಲ್ಲದೆ ಕಮರುತ್ತಿವೆ. ಅಂತಹ ಪ್ರತಿಭೆಗಳಿಗೆ ಇದು ಅತ್ಯುತ್ತಮ ವೇದಿಕೆಯಾಗಲಿದೆ’ ಎಂದು ಹೇಳಿದರು.
ಇನ್ಮುಂದೆ ಪ್ರತಿ ವರ್ಷ ಕ್ರೀಡಾಕೂಟದಲ್ಲಿ 13 ರಿಂದ 15 ವಯೋಮಿತಿಯವರಿಗಾಗಿ ಮಿನಿ ಒಲಿಂಪಿಕ್ಸ್ ನಡೆಸಲಾಗುತ್ತದೆ. ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ನಂತರದ ದಿನಗಳಲ್ಲಿ ಕ್ರೀಡಾ ಸೌಲಭ್ಯಗಳನ್ನು ಹೊಂದಿರುವ ಬೆಳಗಾವಿ, ಧಾರವಾಡ, ಕಲಬುರ್ಗಿ, ಮಂಗಳೂರು ಮೈಸೂರು ಸೇರಿದಂತೆ ಇತರೆಡೆಗಳಲ್ಲಿ ನಡೆಸಲಾಗುವುದು. ಆರಂಭಿಕ ಕ್ರೀಡಾಕೂಟವನ್ನು ಒಟ್ಟು ₹1.5 ಕೋಟಿ ವೆಚ್ಚದಲ್ಲಿ ನಡೆಸುವ ಯೋಜನೆ ಇರಿಸಿಕೊಳ್ಳಲಾಗಿದೆ. ಉತ್ತಮ ಪ್ರದರ್ಶನ ತೋರುವ ಕ್ರೀಡಾಪಟುಗಳಿಗೆ ಟ್ರೋಫಿ ಮತ್ತು ಪದಕಗಳೊಂದಿಗೆ ನಗದು ಬಹುಮಾನವನ್ನು ನೀಡಲಾಗುವುದು’ ಎಂದರು.
ಆರಂಭಿಕ ಆವೃತ್ತಿಯಲ್ಲಿ 12ರಿಂದ 15 ಕ್ರೀಡೆಗಳನ್ನು ನಡೆ ಸಲಾಗುತ್ತದೆ. ಸದ್ಯದ ದಿನಗಳಲ್ಲಿ ಹೆಚ್ಚು ಜನಪ್ರಿಯಗೊಳ್ಳುತ್ತಿರುವ ಫುಟ್ಬಾಲ್ ಮತ್ತು ರಾಷ್ಟ್ರೀಯ ಕ್ರೀಡೆ ಹಾಕಿಗೆ ಹೆಚ್ಚು ಒತ್ತು ನೀಡಲಾಗುವುದು. ಆಯ್ಕೆ ಪ್ರಕ್ರಿಯೆ ಹಿರಿಯರ ಕ್ರೀಡಾ ಕೂಟದ ಎಲ್ಲ ಅರ್ಹತಾ ನಿಯಮಗಳು ಈ ಕೂಟಕ್ಕೂ ಅನ್ವಯಿಸಲಿವೆ ಎಂದು ಗೋವಿಂದರಾಜ್ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.