
ಸಿಡ್ನಿ(ಜ.12): ಬಾಲ್ ಟ್ಯಾಂಪರಿಂಗ್ ಪ್ರಕರಣದಿಂದ ಒಂದು ವರ್ಷ ನಿಷೇಧಕ್ಕೊಳಗಾಗಿರುವ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ಬಾಂಗ್ಲಾದೇಶ ಪ್ರಿಮಿಯರ್ ಲೀಗ್‌ನಲ್ಲಿ ಕಣಕ್ಕಿಳಿದಿದ್ದ ಸ್ಮಿತ್ ಇದೀಗ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇಷ್ಟೇ ಅಲ್ಲ ಸ್ಮಿತ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಕೂಡ ಮತ್ತಷ್ಟೂ ಮುಂದೂಡಲಿದೆ.
ಇದನ್ನೂ ಓದಿ: ನಿವೃತ್ತಿ ಪ್ಲಾನ್ ಬಿಚ್ಚಿಟ್ಟ ಕಿಂಗ್ ಕೊಹ್ಲಿ..!
ಮೊಣಕೈ ಗಾಯಕ್ಕೆ ತುತ್ತಾಗಿರುವ ಸ್ಟೀವ್ ಸ್ಮಿತ್ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಹೀಗಾಗಿ ಸ್ಟೀವ್ ಸ್ಮಿತ್ ಬಾಂಗ್ಲಾ ಪ್ರಿಮಿಯರ್ ಲೀಗ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇಷ್ಟೇ ಅಲ್ಲ ಐಪಿಎಲ್ ಟೂರ್ನಿಗೂ ಅಲಭ್ಯರಾಗೋ ಸಾಧ್ಯತೆ ಹೆಚ್ಚಿದೆ. ಮಾರ್ಚ್‌ನಲ್ಲಿ ಸ್ಮಿತ್ ನಿಷೇಧ ಅಂತ್ಯವಾಗಲಿದೆ. ಆದರೆ ಇದೀಗ ಇಂಜುರಿಯಿಂದ ಚೇತರಿಸಿಕೊಳ್ಳಲು ಹೆಚ್ಚಿನ ಕಾಲಾವಕಾಶ ಬೇಕಿದೆ. ಹೀಗಾಗಿ ಅಂತಾರಾಷ್ಟ್ರೀಯ ಪಂದ್ಯಕ್ಕೆ ಕಮ್‌ಬ್ಯಾಕ್ ಕೂಡ ವಿಳಂಭವಾಗಲಿದೆ.
ಇದನ್ನೂ ಓದಿ: ರೋಹಿತ್ ಶರ್ಮಾ ಶತಕ ವ್ಯರ್ಥ -ಏಕದಿನದಲ್ಲಿ ಭಾರತಕ್ಕೆ ಸೋಲಿನ ಶಾಕ್!
2018ರಲ್ಲಿ ಸೌತ್ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್ ಹಾಗೂ ಕ್ಯಮಾರೂನ್ ಬೆನ್‌ಕ್ರಾಫ್ಟ್ ಬಾಲ್ ಟ್ಯಾಂಪರಿಂಗ್ ನಡೆಸಿ ಸಿಕ್ಕಿ ಬಿದ್ದಿದ್ದರು. ಹೀಗಾಗಿ ಸ್ಮಿತ್ ಹಾಗೂ ವಾರ್ನರ್‌ಗೆ ಒಂದು ವರ್ಷ, ಬೆನ್‌ಕ್ರಾಫ್ಟ್‌ಗೆ 9 ತಿಂಗಳ ನಿಷೇಧ ಹೇರಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.