IPL ಟೂರ್ನಿಯಲ್ಲಿ ಈ ಇಬ್ಬರು ಆಸೀಸ್ ನಾಯಕರು ಆಡೋದು ಡೌಟ್..?

By Suvarna Web DeskFirst Published Mar 25, 2018, 8:20 PM IST
Highlights

ಇದೊಂದು ಗಂಭೀರ ಪ್ರಕರಣವಾಗಿದ್ದು, ಐಸಿಸಿ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಯಾವ ತೀರ್ಮಾನ ತೆಗೆದುಕೊಳ್ಳುತ್ತೇವೆ. ಐಪಿಎಲ್ ಟೂರ್ನಿಯು ಏಪ್ರಿಲ್ 7ರಿಂದ ಆರಂಭವಾಗಲಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಶುಕ್ಲಾ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದ ವೇಳೆ ಚೆಂಡು ವಿರೂಪಗೊಳಿಸಿದ ಆರೋಪಕ್ಕೆ ತುತ್ತಾಗಿರುವ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಹಾಗೂ ಉಪನಾಯಕ ಡೇವಿಡ್ ವಾರ್ನರ್ ಈ ಬಾರಿಯ ಐಪಿಎಲ್'ನಲ್ಲಿ ಪಾಲ್ಗೊಳ್ಳುವ ಕುರಿತಂತೆ ಅನುಮಾನಗಳು ಶುರುವಾಗಿವೆ.

ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸ್ಟೀವ್ ಸ್ಮಿತ್ ಹಾಗೂ ಸನ್'ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಈ ಬಾರಿಯ ಐಪಿಎಲ್'ನಲ್ಲಿ ಪಾಲ್ಗೊಳ್ಳುವುದರ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳುವುದಾಗಿ ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ಹೇಳಿದ್ದಾರೆ.

ಇದೊಂದು ಗಂಭೀರ ಪ್ರಕರಣವಾಗಿದ್ದು, ಐಸಿಸಿ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಯಾವ ತೀರ್ಮಾನ ತೆಗೆದುಕೊಳ್ಳುತ್ತೇವೆ. ಐಪಿಎಲ್ ಟೂರ್ನಿಯು ಏಪ್ರಿಲ್ 7ರಿಂದ ಆರಂಭವಾಗಲಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಶುಕ್ಲಾ ಹೇಳಿದ್ದಾರೆ.

ಇನ್ನು ರಾಜಸ್ಥಾನ ರಾಯಲ್ಸ್ ತಂಡದ ಕಾರ್ಯನಿರ್ವಾಹಕ ಅಧ್ಯಕ್ಷ ರಂಜಿತ್ ಭರತಂಕುರ್ ಈ ವಿವಾದದ ಕುರಿತಂತೆ ಸ್ಪಷ್ಟನೆ ನೀಡಿದ್ದು, ಬಿಸಿಸಿಐ ತೀರ್ಮಾನಕ್ಕಾಗಿ ಎದುರು ನೋಡುತ್ತಿದ್ದು, ಆ ಬಳಿಕವಷ್ಟೇ ಸ್ಮಿತ್ ಭವಿಷ್ಯದ ಬಗ್ಗೆ ನಿರ್ಧರಿಸುವುದಾಗಿ ಹೇಳಿದ್ದಾರೆ.

Official Media Statement - Rajasthan Royals

Read more: https://t.co/gXqnIu7xUF pic.twitter.com/RWjoPwIvf3

— Rajasthan Royals (@rajasthanroyals)

ಆದರೆ, ಸನ್'ರೈಸರ್ಸ್ ಹೈದರಾಬಾದ್ ಪ್ರಾಂಚೈಸಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

click me!