ವಿಶ್ವಕಪ್ ಪ್ರಶಸ್ತಿ ರೇಸ್‌ನಲ್ಲಿ ಹಲವು ತಂಡಗಳು ಕಾಣಿಸಿಕೊಂಡಿವೆ. ಆದರೆ ಪ್ರಶಸ್ತಿ ಗೆಲ್ಲೋದು ಯಾರು ಅನ್ನೋ ಕುತೂಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದಕ್ಕೆ ಆಸ್ಟ್ರೇಲಿಯಾ ಮಾಜಿ ನಾಯಕ ಸ್ವೀವ್ ವ್ಹಾ ಉತ್ತರಿಸಿದ್ದಾರೆ.
ಸಿಡ್ನಿ(ಮೇ.21): ವಿಶ್ವಕಪ್ ಟೂರ್ನಿ ಇದೀಗ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಒಂದಡೆ ಆತಿಥೇಯ ಇಂಗ್ಲೆಂಡ್ ಪ್ರಶಸ್ತಿ ಗೆಲ್ಲೋ ನೆಚ್ಚಿನ ತಂಡ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇತ್ತ ಭಾರತ, ಆಸ್ಟ್ರೇಲಿಯಾ ಕೂಡ ಪ್ರಶಸ್ತಿ ರೇಸ್‌ನಲ್ಲಿ ಕಾಣಿಸಿಕೊಂಡಿದೆ. ಇದೀಗ ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಸ್ಟೀವ್ ವ್ಹಾ 2019ರ ವಿಶ್ವಕಪ್ ಟೂರ್ನಿ ಗೆಲ್ಲುವ ನೆಚ್ಚಿನ ತಂಡ ಪ್ರಕಟಿಸಿದ್ದಾರೆ.
ಇದನ್ನೂ ಓದಿ: World Cup Flashback: 1987ರಿಂದ ಆಸಿಸ್ ವಿಶ್ವಕಪ್ ಅಧಿಪತ್ಯ ಆರಂಭ
ಸ್ವೀವ್ ವ್ಹಾ ಪ್ರಕಾರ, 2019ರ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ತಂಡ, ಭಾರತ ವಿರುದ್ದ ಉತ್ತಮ ಪ್ರದರ್ಶನ ನೀಡಿತ್ತು. ಇದೀಗ ವಾರ್ನರ್ ಹಾಗೂ ಸ್ಮಿತ್ ತಂಡ ಸೇರಿಕೊಂಡಿದ್ದಾರೆ. ಹೀಗಾಗಿ ಯಾವುದೇ ಕಂಡೀಷನ್‌ನಲ್ಲಿ ಆಸ್ಟ್ರೇಲಿಯಾ ಅತ್ಯುತ್ತಮ ಪ್ರದರ್ಶನ ನೀಡೋ ವಿಶ್ವಾಸವಿದೆ ಎಂದಿದ್ದಾರೆ.
ಇದನ್ನೂ ಓದಿ: ವಿಶ್ವಕಪ್‌ನಿಂದ ಔಟ್: ಜುನೈದ್ ಪ್ರತಿಭಟನೆ!
ಐಪಿಎಲ್ ಟೂರ್ನಿಯಲ್ಲಿ ವಾರ್ನರ್ ಹಾಗೂ ಸ್ಮಿತ್ ತಮ್ಮ ಸಾಮರ್ಥ್ಯ ಸಾಬೀತು ಪಡಿಸಿದ್ದಾರೆ. ಒಂದು ವರ್ಷ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ಹೊರಗಿದ್ದರೂ ಫಾರ್ಮ್‌ನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇದು ಆಸಿಸ್ ತಂಡಕ್ಕೆ ನೆರವಾಗಲಿದೆ ಎಂದಿದ್ದಾರೆ.