
ಪರ್ತ್(ನ.04): ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಡೇಲ್ ಸ್ಟೇನ್ ಮತ್ತೆ ಭುಜದ ನೋವಿಗೆ ತುತ್ತಾಗಿದ್ದು, ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಬಿದ್ದಿದ್ದಾರೆ.
ಮೊದಲ ಟೆಸ್ಟ್'ನ ಎರಡನೇ ದಿನವಾದ ಶುಕ್ರವಾರದ ಆಟದ ವೇಳೆ ಸ್ಟೇನ್ ತಮ್ಮ 12ನೇ ಓವರ್‌ನ 4ನೇ ಎಸೆತವನ್ನು ಎಸೆಯುವ ವೇಳೆ ಭುಜದ ನೋವಿಗೆ ಒಳಗಾದರು. ಆ ಕೂಡಲೇ ಸ್ಟೇನ್ ಅವರನ್ನು ತಂಡದ ಪಿಸಿಯೊ ಪೆವಿಲಿಯನ್‌ಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಿದರು. ಆದರೂ ಗಂಭೀರ ಪ್ರಮಾಣದ ನೋವು ಕಾಣಿಸಿಕೊಂಡಿದ್ದರಿಂದ ಸ್ಟೇನ್ ಅವರಿಗೆ ಆಸೀಸ್ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.
ಸ್ಟೇನ್, ಭಾರತ ಪ್ರವಾಸ ಕೈಗೊಂಡಿದ್ದ ವೇಳೆಯಿಂದಲೂ ಸತತವಾಗಿ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.