
ಮುಂಬೈ(ಜೂ.10): ಯುವರಾಜ್ ಸಿಂಗ್ ಹೆಸರು ಕೇಳಿದರೆ ಬೆಚ್ಚಿ ಬೀಳುವ ಬೌಲರ್ ಅಂದರೆ ಅದು ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್. 2007ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸ್ಟುವರ್ಟ್ ಬ್ರಾಡ್ ಓವರ್‌ನ 6 ಎಸೆತಗಳನ್ನೂ ಸಿಕ್ಸರ್ ಸಿಡಿಸಿ ದಾಖಲೆ ಬರೆದಿದ್ದರು. ಅದು ಸ್ಟುವರ್ಟ್ ಬ್ರಾಡ್ ಕರಿಯರ್‌ನ ಅತ್ಯಂತ ಕೆಟ್ಟ ದಿನವಾಗಿತ್ತು. ಇದೀಗ ಯುವರಾಜ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುತ್ತಿದ್ದಂತೆ ನಿಟ್ಟುಸಿರುಬಿಟ್ಟಿದ್ದಾರೆ.
ಇದನ್ನೂ ಓದಿ: ಯುವರಾಜ್ ಸಿಂಗ್ ನಿವೃತ್ತಿ- ವಿಶ್ವಕಪ್ ಹೀರೋಗೆ ಶುಭಕೋರಿದ ಲೆಜೆಂಡ್ಸ್!
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಯುವರಾಜ್ ಸಿಂಗ್ ವಿದಾಯ ಹೇಳುತ್ತಿದ್ದಂತೆ, ವೇಗಿ ಸ್ಟುವರ್ಟ್ ಬ್ರಾಡ್ ಶುಭಕೋರಿದ್ದಾರೆ. ಮಂದಿನ ದಿನಗಳನ್ನು ಆನಂದಿಸಿ ದಿಗ್ಗಜ ಎಂದು ಶುಭಕೋರಿದ್ದಾರೆ. ಯುವಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಕ್ರೀಯರಾಗಿದ್ದಾಗ, ಸ್ಟುವರ್ಟ್ ಬ್ರಾಡ್ ಕ್ರಿಕೆಟ್ ದಿನವನ್ನು ಆನಂದಿಸಿಲ್ಲ. ಇದೀಗ ಯುವಿಗೆ ವಿದಾಯದ ದಿನಗಳನ್ನು ಆನಂದಿಸಿ ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.