
ಶ್ರೀನಗರ(ಮೇ.23): ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಮೈದಾನವೊಂದರಲ್ಲಿ ಕ್ರಿಕೆಟ್ ಪ್ರಾರಂಭಕ್ಕೂ ಮುನ್ನ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ರಾಷ್ಟ್ರಗೀತೆಯನ್ನು ಪ್ರಸಾರ ಮಾಡಲಾಗಿದೆ.
ಈ ವಿಡಿಯೋ ಇದೀಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು, ಈ ಕುರಿತಾದ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ.
ಪುಲ್ವಾಮಾ ಜಿಲ್ಲೆಯ ಸ್ಟೇಡಿಯಂನಲ್ಲಿ ಶೈನಿಂಗ್ ಸ್ಟಾರ್ಸ್ ಮತ್ತು ಪುಲ್ವಾಮಾ ಟೈಗರ್ಸ್ ನಡುವೆ ಫೈನಲ್ ಕ್ರಿಕೆಟ್ ಪಂದ್ಯದ ಮುನ್ನ ಎರಡೂ ತಂಡಗಳು ಸಾಲಾಗಿ ನಿಂತುಕೊಂಡ ವೇಳೆ ಪಾಕ್ ಆಕ್ರಮಿತ ಕಾಶ್ಮೀರದ ರಾಷ್ಟ್ರಗೀತೆಯನ್ನು ಮೈಕ್'ನಲ್ಲಿ ಪ್ರಸಾರ ಮಾಡಲಾಗಿದೆ.
ಈ ವಿಡಿಯೊ ಇದೀಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಅಲ್ಲದೆ, ಜಮ್ಮು-ಕಾಶ್ಮೀರದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಉಗ್ರರ ಪೋಸ್ಟರ್‌ಗಳನ್ನು ಸಹ ಸ್ಟೇಡಿಯಂ ಸುತ್ತಮುತ್ತಲಿನ ಗೋಡೆಗಳ ಮೇಲೆ ಅಂಟಿಸಲಾಗಿತ್ತು ಎಂದು ಹೇಳಲಾಗಿದೆ.
ಆ ದೃಶ್ಯ ನಿಮ್ಮ ಮುಂದೆ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.