
ನವದೆಹಲಿ(ನ.05): ಸನ್ ರೈಸರ್ಸ್ ತಂಡದ ಸ್ಟಾರ್ ಆಟಗಾರ ಶಿಖರ್ ಧವನ್ ಇದೀಗ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಸೇರಿಕೊಂಡಿದ್ದಾರೆ. 2008ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಪರ ಆಡಿದ್ದ ಶಿಖರ್ ಧವನ್ ಬಳಿಕ ಇತರದ ಪರ ಆಡಿದ್ದರು. ಇದೀಗ ಮತ್ತೆ ತವರಿಗೆ ಮರಳಿದ್ದಾರೆ.
ಧವನ್ ಡೆಲ್ಲಿ ತಂಡ ಸೇರಿಕೊಂಡಿರುವ ಕುರಿತು ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಆಧಿಕೃತ ಪ್ರಕಟಣೆ ಹೊರಡಿಸಿದೆ. ಸಂಭಾವನೆಯಲ್ಲಿ ಅಸಮಧಾನ ಹೊಂದಿದ್ದ ಶಿಖರ್ ಧವನ್ ಸನ್ ರೈಸರ್ಸ್ಸ ತಂಡದಿಂದ ಹೊರಬಂದಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿತ್ತು.
2013ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಸೇರಿಕೊಂಡರು. ಬಳಿಕ 2018ರ ವರೆಗೆ ರೈಸರ್ಸ್ ತಂಡದ ನಾಯಕನಾಗಿ, ಆರಂಭಿಕ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿದ್ದರು. 2019ರಲ್ಲಿ ಧವನ್ ಡೆಲ್ಲಿ ತಂಡದ ಪರ ಕಣಕ್ಕಿಳಿಯಲಿದ್ದಾರೆ. 2008ರಲ್ಲಿ ಡೆಲ್ಲಿ ಪರ ಆಡಿದ್ದ ಧವನ್ ಮುಂಬೈ ಇಂಡಿಯನ್ಸ್ ಹಾಗೂ ಡೆಕ್ಕನ್ ಚಾರ್ಜಸ್ ಪರ ಕಣಕ್ಕಿಳಿದಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.