ಮುಂಬೈಗೆ ಮತ್ತೆ ಮುಖಭಂಗ, ರೋಚಕ ಜಯ ಸಾಧಿಸಿದ ಸನ್‌ರೈಸರ್ಸ್

Published : Apr 12, 2018, 11:50 PM ISTUpdated : Apr 14, 2018, 01:13 PM IST
ಮುಂಬೈಗೆ ಮತ್ತೆ ಮುಖಭಂಗ, ರೋಚಕ ಜಯ ಸಾಧಿಸಿದ ಸನ್‌ರೈಸರ್ಸ್

ಸಾರಾಂಶ

ಸನ್‌ರೈಸರ್ಸ್ ಹೈದರಾಬಾದ್ ತಂಡದ ಸಂಘಟಿತ ಪ್ರದರ್ಶನದ ನೆರವಿನಿಂದ ಮುಂಬೈ ವಿರುದ್ಧ 1 ವಿಕೆಟ್‌ ಭರ್ಜರಿ ಜಯ ಸಾಧಿಸಿದೆ.

ಹೈದರಾಬಾದ್: ಸನ್‌ರೈಸರ್ಸ್ ಹೈದರಾಬಾದ್ ತಂಡದ ಸಂಘಟಿತ ಪ್ರದರ್ಶನದ ನೆರವಿನಿಂದ ಮುಂಬೈ ವಿರುದ್ಧ 1 ವಿಕೆಟ್‌ ಭರ್ಜರಿ ಜಯ ಸಾಧಿಸಿದೆ.

ಮುಂಬೈ ಇ‌ಂಡಿಯನ್ಸ್ ನೀಡಿದ್ದ ಸುಲಭ ಗುರಿ ಬೆನ್ನತ್ತಿದ ಹೈದರಾಬಾದ್ ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ 62 ರನ್ ಕಲೆ ಹಾಕಿತು. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ವೃದ್ದಿಮಾನ್ ಸಾಹ 22 ರನ್ ಗಳಿಸಿ ಮಾರ್ಕಂಡೆ ಬೌಲಿಂಗ್‌ನಲ್ಲಿ ಎಲ್'ಬಿ ಬಲೆಗೆ ಬಿದ್ದರು. ಇನ್ನು ಸ್ಪೋಟಕ ಬ್ಯಾಟಿಂಗ್ ನಡೆಸಿದ ಧವನ್ ಕೇವಲ 28 ಎಸೆತಗಳಲ್ಲಿ 8 ಬೌಂಡರಿಗಳ ನೆರವಿನೊಂದಿಗೆ 45 ರನ್ ಸಿಡಿಸಿ ಮಾರ್ಕಂಡೇಯ ಬಲೆಗೆ ಬಿದ್ದರು. ನಾಯಕ ಕೇನ್ ವಿಲಿಯಮ್ಸನ್ ಕೇವಲ 6 ರನ್ ಸಿಡಿಸಿ ನಿರಾಸೆ ಮೂಡಿಸಿದರು. ಮಧ್ಯಮ ಕ್ರಮಾಂಕದಲ್ಲಿ ಪಾಂಡೆ(11) ಹಾಗೂ ಶಕೀಬ್ ಅಲ್ ಹಸನ್(12) ಕೂಡಾ ಹೆಚ್ಚುಹೊತ್ತು ಕ್ರಿಸ್‌ನಲ್ಲಿ ನಿಲ್ಲಲ್ಲಿಲ್ಲ. 

ಕೊನೆಯಲ್ಲಿ ದೀಪಕ್ ಹೂಡಾ ಬಾರಿಸಿದ ಉಪಯುಕ್ತ ೩೨ ರನ್ ಗಳ ನೆರವಿನಿಂದ ಸನ್ ರೈಸರ್ಸ್ ರೋಚಕ ಜಯ ಸಾಧಿಸಿತು.

ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಲೆವಿಸ್, ಸೂರ್ಯಕುಮಾರ್ ಯಾದವ್ ಹಾಗೂ ಪೊಲ್ಲಾರ್ಡ್ ಬ್ಯಾಟಿಂಗ್ ನೆರವಿನಿಂದ 8 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿತ್ತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?