
ನವದೆಹಲಿ(ಡಿ.05): ಅಯೋಧ್ಯೆಯಲ್ಲಿನ ರಾಮಜನ್ಮ ಭೂಮಿ ಮತ್ತು ಬಾಬ್ರಿ ಮಸೀದಿ ವಿವಾದದ ಕುರಿತಂತೆ ಸುಪ್ರೀಂ ಕೋರ್ಟ್ ಇಂದಿನಿಂದ ಅಂತಿಮ ಹಂತದ ವಿಚಾರಣೆ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ಕರ ಸೇವಕರಿಂದ ಬಾಬ್ರಿ ಮಸೀದಿ ಧ್ವಂಸವಾಗಿ ನಾಳೆಗೆ 25 ವರ್ಷ ತುಂಬುತ್ತಿದೆ.
2.77 ಎಕರೆಯ ವಿವಾದಾತ್ಮಕ ಭೂಮಿಯನ್ನು ಅಲಹಾಬಾದ್ ಹೈಕೋರ್ಟ್ ರಾಮ್ ಲಲ್ಲಾ ವಿರಾಜ್'ಮಾನ್, ಸುನ್ನಿ ವಕ್ಫ್'ಬೋರ್ಡ್ ಹಾಗೂ ನಿರ್ಮೋಹಿ ಅಕಾರಗೆ ಸಮವಾಗಿ ಹಂಚಿಕೆ ಮಾಡಿ ತೀರ್ಪು ನೀಡಿತ್ತು. ಹೈಕೋರ್ಟ್ ತೀರ್ಮಾನವನ್ನು ಪ್ರಶ್ನಿಸಿ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಸೇರಿದಂತೆ ಹಲವರು ಸುಪ್ರೀಂ ಕೋರ್ಟ್'ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಅಬ್ದುಲ್ ನಜೀರ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ತೀರ್ಪಿನ ಮೇಲ್ಮನವಿ ಕುರಿತಂತೆ ವಿಚಾರಣೆ ಮಾಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.