
ಮುಂಬೈ(ಅ.28): ಭಾರತದ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಸಿಗ್ನಲ್ಸ್‌ಗಳನ್ನು ಪ್ರಸಾರ ಮಾಡುವ ಎಲ್ಲ ಖಾಸಗಿ ಚಾನೆಲ್‌ಗಳು ದೂರದರ್ಶನದ ಜೊತೆ ಹಂಚಿಕೊಳ್ಳಬೇಕೆಂದು ಕೇಂದ್ರ ಸರ್ಕಾರ ಸೂಚಿಸಿದೆ.
ಇದರಲ್ಲಿ ವಿಶ್ವಕಪ್ ಮತ್ತು ಐಸಿಸಿ ಚಾಂಪಿಯನ್ಸ್ ಟ್ರೋಫಿಯಂತಹ ಟೂರ್ನಿಗಳಲ್ಲಿನ ಸೆಮಿಫೈನಲ್ಸ್ ಮತ್ತು ಫೈನಲ್ಸ್ ಪಂದ್ಯಗಳು ಒಳಗೊಂಡಿವೆ.
ಈ ಹಿಂದೆ ದೂರದರ್ಶನದಲ್ಲಿ ಕ್ರಿಕೆಟ್ ಪ್ರಸಾರವಾಗದಿದ್ದಾಗ ಹಲವು ನ್ಯಾಯಾಲಯಗಳಲ್ಲಿ ದಾವೆಗಳನ್ನು ಅನೇಕರು ಹೂಡಿದ್ದರು. ಆದ್ದರಿಂದ ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೋ ಜೊತೆ ಕ್ರಿಕೆಟ್ ಸಿಗ್ನಲ್‌ಗಳನ್ನು ಹಂಚಿಕೊಂಡು ಇಂತಹ ಪ್ರಕರಣಗಳನ್ನು ತಪ್ಪಿಸಬೇಕು ಎಂದು ಸಲಹೆ ಮಾಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.