
ಸಿಡ್ನಿ[ಜ.12]: ಆರಂಭಿಕ ಆಘಾತದ ಹೊರತಾಗಿಯೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್’ಮನ್’ಗಳ ಸಮಯೋಚಿತ ಪ್ರದರ್ಶನದ ನೆರವಿನಿಂದ ಆಸ್ಟ್ರೇಲಿಯಾ 288 ರನ್ ಬಾರಿಸಿದ್ದು, ಭಾರತಕ್ಕೆ ಸವಾಲಿನ ಗುರಿ ನೀಡಿದೆ. ಆಸ್ಟ್ರೇಲಿಯಾ ಪರ ಪೀಟರ್ ಹ್ಯಾಂಡ್ಸ್’ಕಂಬ್, ಉಸ್ಮಾನ್ ಖ್ವಾಜಾ ಹಾಗೂ ಶಾನ್ ಮಾರ್ಷ್ ಅರ್ಧಶತಕ ಸಿಡಿಸಿದರು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಆರಂಭದಲ್ಲೇ ನಾಯಕ ಆ್ಯರೋನ್ ಫಿಂಚ್ ವಿಕೆಟ್ ಕಳೆದುಕೊಂಡಿತು. ಇದಾದ ಕೆಲಹೊತ್ತಿನಲ್ಲೇ ಮತ್ತೋರ್ವ ಆರಂಭಿಕ ಬ್ಯಾಟ್ಸ್’ಮನ್ ಅಲೆಕ್ಸ್ ಕೋರಿ ಕೂಡಾ ಪೆವಿಲಿಯನ್ ಹಾದಿ ಹಿಡಿದರು. ಈ ವೇಳೆ ಮೂರನೇ ವಿಕೆಟ್’ಗೆ ಜತೆಯಾದ 92 ರನ್’ಗಳ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು ನೂರರ ಗಡಿ ದಾಟಿಸಿದರು. ಈ ವೇಳೆ ಖ್ವಾಜಾ 59 ರನ್ ಸಿಡಿಸಿ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು. ನಾಲ್ಕನೇ ವಿಕೆಟ್’ಗೆ ಮಾರ್ಷ್ ಜತೆ ಇನ್ನಿಂಗ್ಸ್ ಕಟ್ಟಿದ ಪೀಟರ್ ಹ್ಯಾಂಡ್ಸ್’ಕಂಬ್ 53 ರನ್’ಗಳ ಜತೆಯಾಟವಾಡಿದರು. ಮಾರ್ಷ್ 54 ರನ್ ಬಾರಿ ಕುಲ್ದೀಪ್ ಯಾದವ್’ಗೆ ಎರಡನೇ ಬಲಿಯಾದರು. ಕೊನೆಯಲ್ಲಿ ಅಬ್ಬರಿಸಿದ ಪೀಟರ್ ಹ್ಯಾಂಡ್ಸ್’ಕಂಬ್ ಕೇವಲ 61 ಎಸೆತಗಳಲ್ಲಿ 73 ರನ್ ಬಾರಿಸಿದರೆ, ಸ್ಟೋನಿಸ್ 47 ರನ್ ಬಾರಿಸಿ ಅಜೇಯರಾಗುಳಿದರು.
ಭಾರತ ಪರ ಭುವನೇಶ್ವರ್ ಕುಮಾರ್ ಹಾಗೂ ಕುಲ್ದೀಪ್ ಯಾದವ್ ತಲಾ 2 ವಿಕೆಟ್ ಪಡೆದರೆ, ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದರು.
ಸಂಕ್ಷಿಪ್ತ ಸ್ಕೋರ್:
ಆಸ್ಟ್ರೇಲಿಯಾ: 288/5
ಪೀಟರ್ ಹ್ಯಾಂಡ್ಸ್’ಕಂಬ್: 73
ಕುಲ್ದೀಪ್: 54/2
[* ವಿವರ ಅಪೂರ್ಣ]
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.